people

ಲಾರಿ ಮತ್ತು ಬಸ್ ನಡುವೆ ಡಿಕ್ಕಿ ೧೦ ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ, ಡಿ,30 : ಸಕ್ರೆಬೈಲು ಮತ್ತು ಮಂಡಗದ್ದೆಯ ನಡುವೆ ಲಾರಿ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು ೧೦ ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ. ಲಾರಿ ಚಾಲಕನಿಗೆ ತೀವ್ರ ಗಾಯವಾಗಿದ್ದು ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕ್ರೆಬೈಲು ಮತ್ತು ಮಂಡಗದ್ದೆಯ ರಸ್ತೆ ಮಧ್ಯ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿ ಲಾರಿ ಚಾಲಕ ಆದರ್ಶ್ ಎಂಬುವವರಿಗೆ ತೀವ್ರ ಗಾಯವಾಗಿದ್ದು ಅವರನ್ನು ಕೂಡಲೆ ಆಸ್ಪತ್ರೆಗೆ ಸೇರಿಸಲಾಗಿದೆ. …

ಲಾರಿ ಮತ್ತು ಬಸ್ ನಡುವೆ ಡಿಕ್ಕಿ ೧೦ ಕ್ಕೂ ಹೆಚ್ಚು ಜನರಿಗೆ ಗಾಯ Read More »

ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ : ಸಿಎಂ

ಬೆಂಗಳೂರು, ಡಿ, 27 : ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಎಲ್ಲ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಈಗಾಗಲೇ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಚೆಕ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕೋವಿಡ್ ನಿಯಂತ್ರಣ ಕ್ರಮವಾಗಿ ಘೋಷಿಸಲಾಗಿರುವ ನೈಟ್ ಕರ್ಫ್ಯೂ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಯಿಸಿ, …

ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ : ಸಿಎಂ Read More »

ಸರಕಾರಿ ಜಮೀನಿನಲ್ಲಿ ಕೃಷಿ ಹೊಂಡಗಳ ನಿರ್ಮಾಣ ಬಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ತನಿಕೆ ಮಾಡುವಂತೆ ಕರವೆ ಕಾರ್ಯಕರ್ತರಿಂದ ಆಗ್ರಹ

ಕುಷ್ಟಗಿ:- ಕೊಪ್ಪಳ ಜಿಲ್ಲೆ ಕುಷ್ಟಗಿ ಕೃಷಿ ಇಲಾಖೆಯಲ್ಲಿ ಮಾಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ ಆದರೆ ಅಪೂರ್ತಿ ಮಾಡಿದ್ದಾರೆ ಹಾಗೂ ಹೆಚ್ಚಾನು ಹೆಚ್ಚು ಸರಕಾರಿ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ ಆದರೆ ಬಾರಿ ಭ್ರಷ್ಟಾಚಾರ ನೆಡೆದಿದ್ದು ಮೇಲಾಧಿಕಾರಿಗಳು ತನಿಕೆ ನೆಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕ‌ರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲೂಕು ಪಂಚಾಯತಿ ಇಒ ಜಯರಾಂ ಚವ್ಹಾಣ ಇವರಿಗೆ ಮನವಿ ಪತ್ರ ಸಲ್ಲಿಸಿದರು. ಕೃಷಿ ಇಲಾಖೆಯಲ್ಲಿ 2021-22 ನೇ …

ಸರಕಾರಿ ಜಮೀನಿನಲ್ಲಿ ಕೃಷಿ ಹೊಂಡಗಳ ನಿರ್ಮಾಣ ಬಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ತನಿಕೆ ಮಾಡುವಂತೆ ಕರವೆ ಕಾರ್ಯಕರ್ತರಿಂದ ಆಗ್ರಹ Read More »

ಗ್ರಾಮೀಣ ಪ್ರದೇಶದ ಜನರಿಗೆ ಸಹಕಾರ ಸಂಘದಿಂದ ಅನೇಕ ಸೌಲಭ್ಯಗಳು

ದೇವನಹಳ್ಳಿ, ಡಿಸೆಂಬರ್,23 : ಖಾದಿ ಗ್ರಾಮೋದ್ಯೋಗ ಸಹಕಾರ ಸಂಘಕ್ಕೆ ಸರ್ಕಾರದಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ರೂಪಿಸಿ ಸಾಲ ಸೌಲಭ್ಯಗಳನ್ನು ನೀಡಬೇಕು ಎಂದು ಮಾಜಿ ಸಂಸದ ಸಿ.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಬಸವೇಶ್ವರ ಕಲ್ಯಾಣ ಮಂದಿರದಲ್ಲಿ ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕ ವಿವಿಧೋದ್ದೇಶ ಸಹಕಾರ ಸಂಘ ವತಿಯಿಂದ ಹಮ್ಮಿಕೊಂಡಿದ್ದ 2020-21 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘಕ್ಕೆ ಕೇಂದ್ರಸರ್ಕಾರದ ಮಟ್ಟದಲ್ಲಿ ಸಾಲಸೌಲಭ್ಯಗಳು ಸರ್ಕಾರಕ್ಕೆ ಒತ್ತಾಯ ಮಾಡಿ …

ಗ್ರಾಮೀಣ ಪ್ರದೇಶದ ಜನರಿಗೆ ಸಹಕಾರ ಸಂಘದಿಂದ ಅನೇಕ ಸೌಲಭ್ಯಗಳು Read More »

ಲಾರಿಗಳ ಸಂಚಾರ ನಿಲ್ಲಿಸುವಂತೆ ಗ್ರಾಮಸ್ಥರ ಒತ್ತಾಯ

ಚಿಕ್ಕಬಳ್ಳಾಪುರ : ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಬಳಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ  ಕಲ್ಲುದಿಮ್ಮಿಗಳು ತುಂಬಿದ ಲಾರಿಗಳ  ಸಂಚಾರ ನಡೆಯುತ್ತಿದ್ದು, ಇದಕ್ಕೆ ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿ ಲಾರಿಗಳ ಸಂಚಾರ ನಿಲ್ಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜಿಲೆಟಿನ್ ಕಡ್ಡಿಗಳ ಸ್ಪೋಟ ಮತ್ತು ಲಾರಿಗಳ ಹಾವಳಿಗೆ ಗ್ರಾಮಸ್ಥರು ಹೈರಾಣಾಗಿದ್ದು, ಗ್ರಾಮಸ್ಥರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಜೀವನ ನಡೆಸುವಂತಾಗಿದೆ. ಈ ಭಾಗದಲ್ಲಿ ನಿತ್ಯ ಕಲ್ಲುದಿಮ್ಮಿಗಳು ತುಂಬಿದ ಲಾರಿಗಳು ಓಡಾಡುತ್ತಿದ್ದು, ಇದರಿಂದ ಗ್ರಾಮಸ್ಥರು ಕಿರುಕುಳ ಅನುಭವಿಸುವಂತಾಗಿದೆ ಅಲ್ಲದೆ ಕಲ್ಲು ಗಣಿಗಾರಿಕೆಯಿಂದ ಬರುತ್ತಿರುವ  ದೂಳಿನಿಂದ ಬೆಳೆ ನಾಶವಾಗುತ್ತಿದ್ದು, …

ಲಾರಿಗಳ ಸಂಚಾರ ನಿಲ್ಲಿಸುವಂತೆ ಗ್ರಾಮಸ್ಥರ ಒತ್ತಾಯ Read More »

ಲಸಿಕೆ ಹಾಕಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ

ಕುಷ್ಟಗಿ : ಕ್ಷೇತ್ರದ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ತುಮರಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದರು.ಜಿಲ್ಲಾಮಟ್ಟದ ಕೋರೋನಾ ಲಸಿಕೆ ಕಾರ್ಯಕ್ರಮ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಶಾಸಕರು ತಾಲೂಕಿನ ಪಟ್ಟಲಚಿಂತಿ ಗ್ರಾಮಕ್ಕೆ ಭೇಟಿ ನೀಡಿದರು.ನಂತರ ಮಾತನಾಡಿದ ಅವರು, ಜನರಿಗೆ ಕೋರೋನಾ ಬರದ ಹಾಗೆ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಹಾಕಿಸಿ ಕೊಳ್ಳುವಂತೆ ಜನತೆಗೆ ಮನವಿ ಮಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ. 100 ರಷ್ಟು ವ್ಯಾಕ್ಸಿನೇಷನ್ ಮಾಡುವ ಉದ್ದೇಶದಿಂದ ತಾಲೂಕಿನ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ …

ಲಸಿಕೆ ಹಾಕಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ Read More »

Translate »
Scroll to Top