psi

ಅಶ್ವತ್ಥ್ ನಾರಾಯಣ ಭ್ರಷ್ಟಾಚಾರಕ್ಕೇ ವಿಶ್ವಮಾನವ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಅಭ್ಯರ್ಥಿ ರಕ್ಷಣೆಗೆ ಮುಂದಾಗಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ‘ಭ್ರಷ್ಟಾಚಾರಕ್ಕೇ ವಿಶ್ವಮಾನವ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಗುರುವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಅಶ್ವಥ್ ನಾರಾಯಣ್ ಅವರು, ತಾನು ವಿಶ್ವ ಮಾನವ, ಒಕ್ಕಲಿಗ ಎಂದು ಹೇಳಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, ‘ಅವರು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಅವರು ರಾಮನಗರವನ್ನು ಕ್ಲೀನ್ ಮಾಡುತ್ತೇವೆ …

ಅಶ್ವತ್ಥ್ ನಾರಾಯಣ ಭ್ರಷ್ಟಾಚಾರಕ್ಕೇ ವಿಶ್ವಮಾನವ: ಡಿ.ಕೆ. ಶಿವಕುಮಾರ್ Read More »

ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. …

ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read More »

ಪಿಎಸ್ಐ ನೇಮಕ ಅಕ್ರಮದಲ್ಲಿ ಸಚಿವರ ತಮ್ಮ ಅಂತಾ ಅಲ್ಲ, ಮಂತ್ರಿಗಳ ಸಂಬಂಧಿ ಭಾಗಿಯಾಗಿದ್ದಾರೆ

ಬೆಂಗಳೂರು: ನನಗೆ ಬಂದಿರುವ ಮಾಹಿತಿ ಪ್ರಕಾರ ಪಿಎಸ್ಐ ನೇಮಕ ಅಕ್ರಮದಲ್ಲಿ ಸಚಿವರ ತಮ್ಮ ಅಂತಾ ಅಲ್ಲ, ಮಂತ್ರಿಗಳ ಸಂಬಂಧಿ ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ಇದು ಸತ್ಯವಿರಬಹುದು, ಇಲ್ಲದಿರಬಹುದು. ಒಂದೇ ತಾಲೂಕಿನ ಮೂವರು ಈ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಅವರು ಆಸ್ತಿ ಮಾರಿ ಹಣ ನೀಡಿರುವುದು ಇಡೀ ಊರಿಗೆ ಗೊತ್ತಿರುವ ವಿಚಾರ. ಈ ವಿಚಾರವಾಗಿ ನಾನು ನೊಟೀಸ್ ಪಡೆಯುವ ಅಗತ್ಯವಿರುವುದಿಲ್ಲ. ನನಗೆ ಸಾಕಷ್ಟು ಕರೆಗಳು ಬರುತ್ತಿದ್ದು, ಆಯ್ಕೆಯಾಗಿದ್ದ ಅಭ್ಯರ್ಥಿ ತಂದೆ ಈ ರೀತಿ ಆಯ್ತಲ್ಲಾ ಎಂದು ಹಾಸಿಗೆ ಹಿಡಿದಿದ್ದಾರೆ. ಮತ್ತೊಬ್ಬರನ್ನು …

ಪಿಎಸ್ಐ ನೇಮಕ ಅಕ್ರಮದಲ್ಲಿ ಸಚಿವರ ತಮ್ಮ ಅಂತಾ ಅಲ್ಲ, ಮಂತ್ರಿಗಳ ಸಂಬಂಧಿ ಭಾಗಿಯಾಗಿದ್ದಾರೆ Read More »

ಪಿಎಸ್ಐ ಮರು ಪರೀಕ್ಷೆ ಬೇಡ: ಹೆಚ್ಡಿಕೆ

ಮೊಳಕಾಲ್ಮೂರು: ಪಿಎಸ್ಐ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಬರೆದು ಪಾಸಗಿರುವ ಅಭ್ಯರ್ಥಿಗಳಿಗೆ ಅನ್ಯಾಯ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಅಲ್ಲದೆ, ತಪ್ಪು ಮಾಡಿರುವ ಅಭ್ಯರ್ಥಿಗಳಿಗೆ ಭವಿಷ್ಯದಲ್ಲಿ ಸರಕಾರಿ ಉದ್ಯೋಗ ಅವಕಾಶದಿಂದ ಸಂಪೂರ್ಣವಾಗಿ ದೂರ ಇಡಬೇಕು ಎಂದು ಅವರು ತಿಳಿಸಿದರು. ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆ ಬರೆದ ಪ್ರಾಮಾಣಿಕ ಅಭ್ಯರ್ಥಿಗಳು ಕೇಳುತ್ತಿರುವುದರಲ್ಲಿ ನ್ಯಾಯ ಇದೆ. ಈಗ ಯಾರು ಹಣ ಕೊಟ್ಟು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ, ಅಕ್ರಮವೆಸಗಿದ್ದಾರೆ ಎಂಬ …

ಪಿಎಸ್ಐ ಮರು ಪರೀಕ್ಷೆ ಬೇಡ: ಹೆಚ್ಡಿಕೆ Read More »

ತನಿಖೆ ಪೂರ್ಣಗೊಳ್ಳುವ ಮುನ್ನವೇ ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ

ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ. ಇದು ಈ ಅಕ್ರಮದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷದ ನಾಯಕರ ರಕ್ಷಣೆಯ ಪ್ರಯತ್ನವಾಗಿದ್ದು, ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಕರ್ನಾಟಕದಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ನೇಮಕಾತಿ ಸಮಿತಿ ರದ್ದು ಮಾಡಿ, ಪರೀಕ್ಷೆಯೇ ಮಾನದಂಡ ಎಂದು ಪ್ರವೇಶ ಪರೀಕ್ಷೆಗಳನ್ನು ಆರಂಭಿಸಲಾಯಿತು. ಇದು ಆರಂಭವಾದ ನಂತರ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗೊಂದಲ ಉದ್ಭವಿಸಿದ್ದನ್ನು ನೋಡಿದ್ದೇವೆ. …

ತನಿಖೆ ಪೂರ್ಣಗೊಳ್ಳುವ ಮುನ್ನವೇ ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ Read More »

ಪಿಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ವಿರೋಧ ಪಕ್ಷದ ನಾಯಕ ಗರಂ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು.ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ …

ಪಿಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ವಿರೋಧ ಪಕ್ಷದ ನಾಯಕ ಗರಂ Read More »

ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಹುಬ್ಬಳ್ಳಿ: ಪಿಎಸ್ʼಐ ಆಯ್ಕೆ ಪರೀಕ್ಷೆಯನ್ನೂ ರದ್ದು ಮಾಡಿ, ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ.ಹುಬ್ಬಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಪಿಎಸ್ʼಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಹಣದ ದುರಾಸೆಗೆ ಬಿದ್ದು ಕೆಲ ಧನ ಪಿಶಾಚಿಗಳು ತಪ್ಪು ಮಾಡಿದ್ದಾರೆ. ಸುಲಭವಾಗಿ ದುಡ್ಡು ಮಾಡುವ ದುರುದ್ದೇಶದಿಂದ ಇಡೀ ವ್ಯವಸ್ಥೆಯನ್ನು ಹಾಳು ಮಾಡಲು ಹೊರಟಿರುವ ಅಂಥವರನ್ನು ಮೊದಲು ಹಿಡಿದು ಶಿಕ್ಷಿಸಿ. ಯಾವ ಅಭ್ಯರ್ಥಿಗಳು ಅಡ್ಡದಾರಿಯಲ್ಲಿ ಪಾಸಾಗಿದ್ದಾರೋ …

ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ Read More »

ಹೊಸದಾಗಿ ಪರೀಕ್ಷೆ ನಡೆಸಿ ಪ್ರತಿಭಾವಂತರಿಗೆ ನ್ಯಾಯ ದೊರಕಿಸಿ

ಬೆಂಗಳೂರು : ಪಿ ಎಸ್ ಐ ನೇಮಕಾತಿ ಪಟ್ಟಿಯನ್ನೇ ರದ್ದು ಪಡಿಸಿ ಹೊಸದಾಗಿ ಪರೀಕ್ಷೆ ನಡೆಸಿ ಪ್ರತಿಭಾವಂತರಿಗೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಘೋಷಿಸಿದ್ದಾರೆ. ಪಿ ಎಸ್ ಐ ನೇಮಕಾತಿ ಬ್ರಹ್ಮಾಂಡ ಭ್ರಷ್ಟಾಚಾರ, ಭಾರಿ ಅಕ್ರಮದ ಕರ್ಮಕಾಂಡ ಅಗಿದ್ದು ದಿನಕ್ಕೊಂದು ರೀತಿಯ ದಗಲ್ಬಾಜಿ ಸಂಗತಿಗಳು ಬೆಳಕಿಗೆ ಬಂದಿದ್ದರಿಂದ ಈ ಪಟ್ಟಿ ರದ್ದಾಗಲೇಬೇಕಿತ್ತು. ಸಹಜವಾಗಿ ಅದನ್ನು ಮಾಡಿದ್ದಾರೆ. ಹೀಗೆ ಮಾಡಿ ಜನರ ಗಮನ ಬೇರೆಡೆ ಸೆಳೆದು ಅಕ್ರಮದ ಆರೋಪಿಗಳನ್ನು ರಕ್ಷಿಸಬಹುದೆಂದು ಗೃಹ ಮಂತ್ರಿ ತಿಳಿದಿದ್ದರೆ ಅದು …

ಹೊಸದಾಗಿ ಪರೀಕ್ಷೆ ನಡೆಸಿ ಪ್ರತಿಭಾವಂತರಿಗೆ ನ್ಯಾಯ ದೊರಕಿಸಿ Read More »

ಮತ್ತೊಮ್ಮೆ PSI ಪರೀಕ್ಷೆ ನಡೆಸಲು ನಿರ್ಧಾರ

ಬೆಂಗಳೂರು: PSI ನೇಮಕಾತಿಗೆ ಕಳೆದ ಆಗಸ್ಟ್ ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದು ತನಿಖೆ ನಡೆಸಿ ಪ್ರಮುಖ ಆರೋಪಿಗಳನ್ನು ಶುಕ್ರವಾರ ಬಂಧಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 545 PSI ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯನ್ನು ಸಂಪೂರ್ಣ ರದ್ದುಪಡಿಸಿ ಈಗ ಮತ್ತೊಮ್ಮೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪಿಎಸ್ ಐ ನೇಮಕಾತಿ ಅಕ್ರಮವು ಮೂರು ಹಂತಗಳಲ್ಲಿ ನಡೆದಿದೆ

ಬೆಂಗಳೂರು : ವಿಧಾನಸೌಧದಲ್ಲಿ ಮಾಡಲಾದ ಧರಣಿಯ ಕಡೆಯ ದಿನ ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ಹಾಗೂ ನಾನು ಪತ್ರಿಕಾಗೋಷ್ಠಿ ನಡೆಸಿ ಪಿಎಸ್ ಐ ನೇಮಕದಲ್ಲಿ ಅಖ್ರಮ ನಡೆದಿರುವ ವಿಚಾರವನ್ನು ಪ್ರಸ್ತಾಪ ಮಾಡಿದ್ದೆವು. ಪಿಎಸ್ ಐ ನೇಮಕಾತಿ ಅಕ್ರಮವು ಮೂರು ಹಂತಗಳಲ್ಲಿ ನಡೆದಿದ್ದು, ಮೊದಲು ಪ್ರಶ್ನೆ ಪತ್ರಿಕೆ ಕೊಡುವಾಗ ವ್ಯವಸ್ಥಿತವಾಗಿ ತಮಗೆ ಬೇಕಾದ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕೊಟ್ಟು ಗೊತ್ತಿರುವುದು ಬರೆದು ಉಳಿದಿದ್ದನ್ನು ಖಾಲಿ ಬಿಡಿ ಎಂದು ಹೇಳಿರುತ್ತಾರೆ. ಎರಡನೇ ಹಂತದಲ್ಲಿ ತಮಗೆ ಬೇಕಾದವರಿಗೆ ಪ್ರಶ್ನೆ ಪತ್ರಿಕೆಯಲ್ಲಿ …

ಪಿಎಸ್ ಐ ನೇಮಕಾತಿ ಅಕ್ರಮವು ಮೂರು ಹಂತಗಳಲ್ಲಿ ನಡೆದಿದೆ Read More »

Translate »
Scroll to Top