ಈ ಬಾರಿ ಕೇಂದ್ರದಲ್ಲೂ BJP ಅಧಿಕಾರಕ್ಕೆ ಬರೋದಿಲ್ಲ: ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುವುದರಿಂದ ಇಲ್ಲಿ ಸುಧಾಕರ್ ಸೋಲಿಸಿ : ಸಿ.ಎಂ.ಸಿದ್ದರಾಮಯ್ಯ ಕರೆ
ಚಿಕ್ಕಬಳ್ಳಾಪುರ: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದರು. ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.