ಮೋದಿ ಸರ್ಕಾರ ಪ್ರತಿಯೊಬ್ಬರ ತಲೆ ಮೇಲೆ 15 ಲಕ್ಷ ಸಾಲದ ಹೊರೆ ಹೊರಿಸಿದೆ – ಬಡವರ ವಿರೋಧಿ ಸರ್ಕಾರ ಕಿತ್ತೊಗೆಯಲು ಸಜ್ಜಾಗಿ – ರಕ್ಷಾ ರಾಮಯ್ಯ
ಬಾಗೇಪಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಪು ಹಣ ನಿರ್ಮೂಲನೆ ಮಾಡಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಇದಕ್ಕಿಂತ ಗಂಭೀರವಾದ ಪರಿಸ್ಥಿತಿ ಎಂದರೆ ಮೋದಿ ಸರ್ಕಾರ ಪ್ರತಿಯೊಬ್ಬರ ತಲೆಯ ಮೇಲೆ 15 ಲಕ್ಷ ರೂಪಾಯಿ ಸಾಲದ ಹೊರೆ ಹೊರೆಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದ್ದಾರೆ.