ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷದಿಂದ 28 ಕ್ಷೇತ್ರಗಳಲ್ಲಿಯೂ ಸ್ಪರ್ಧೆ
ಬಳ್ಳಾರಿ : 2025ರ ಲೋಕಸಭಾ ಚುನಾವಣೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಬಿ) ಭಾರತದ ಹಲವಾರು ರಾಜ್ಯಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧಿಸಲಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಚುನಾವಣೆಯ ಪೂರ್ವ ತಯಾರಿಗಾಗಿ 7 ರಾಜ್ಯಗಳಲ್ಲಿ ಪ್ರವಾಸ ಮಾಡಲಾಗಿದೆ ಎಂದು ಆರ್.ಪಿ.ಐನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಎಸ್ಎಸ್ನ ರಾಜ್ಯಾಧ್ಯಕ್ಷ ಡಾ.ಎನ್. ಮೂರ್ತಿ ತಿಳಿಸಿದರು.