ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ
ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ನಕಲಿ ಛಾಪಾ ಕಾಗದ ಹಗರಣ ನಡೆಸಿದ್ದು, ಕಾನೂನು ಬಾಹಿರ ಫ್ರಾಂಕಿಂಗ್ ಸೇವೆಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟುವ ಜೊತೆಗೆ ಈ ಕುರಿತು ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಆರ್. ಈಶ್ವರ ರಾಜು ಒತ್ತಾಯಿಸಿದ್ದಾರೆ.