ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.