state government

ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸಲು ಹೊಸ ನೀತಿ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ “ಎಲ್ಲರಿಗೂ ವಿಜ್ಞಾನ” ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರಚಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಬಿಜೆಪಿ ಸಮಾಜ ಒಡೆವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಹೊಲಿಯುತ್ತಿದೆ: ಡಿಸಿಎಂ

ಬೆಂಗಳೂರು: ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಛೇಡಿಸಿದರು.

ಸಿಎಂ ವಿರುದ್ಧ ಹರಿಪ್ರಸಾದ್ ಹೇಳಿಕೆ ಬಗ್ಗೆ ಪಕ್ಷ ನಿಗಾ : ಎಂ ಬಿ ಪಾಟೀಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.

ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇ‌ನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ

ಬೆಂಗಳೂರು: “ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?” ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು.

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸರ್ಕಾರ

ಬೆಂಗಳೂರು: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಹುಟ್ಟುಹಬ್ಬದ ಸ್ಮರಣೆಯಲ್ಲಿ ಆಚರಿಸುವ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಇದೇ ಪ್ರಥಮ ಬಾರಿಗೆ ವಿವಿಧ ಆಟೋಟಗಳ ಆಯೋಜನೆಯನ್ನು ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲ ರಂಗಗಳಲ್ಲೂ ವಿಫಲ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ತಲುಪಿದೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಟೀಕಿಸಿದರು.

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ

ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರೈತರ ಹಿತಕಾಯಲು ರಾಜ್ಯ ಸರ್ಕಾರ ಬದ್ದ: ಸಚಿವ ಚಲುವರಾಯಸ್ವಾಮಿ..

ಮಂಡ್ಯ : ಕಾವೇರಿ ನದಿ ನೀರಿನ ಹಂಚಿಕೆ ಸಂಕಷ್ಟ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಸಿಎ, ಕೆಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ 4 ಕೋಟಿ ರೂ ದೇಣಿಗೆ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಗುರುವಾರ ನೀಡಲಾಯಿತು.

Translate »
Scroll to Top