ಸದ್ಯಕ್ಕೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ ಇಲ್ಲ?
ಬೆಂಗಳೂರು: ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುವ ಸಾಧ್ಯತೆಗಳು ಕ್ಷೀಣಿಸಿವೆ.
ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿಡೀರನೆ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಚುನಾಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರೇ ನೀಡಿರುವ ಮಾಹಿತಿಯಂತೆ ಸದ್ಯಕ್ಕೆ ಚುನಾವಣೆ ನಡೆಯುವ ಬಗ್ಗೆ ಸ್ಪಷ್ಟತೆ ನೀಡಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಅನಿಶ್ಚಿತತೆಗೆ ಸಿಲುಕಿದೆ.