ಟನಲ್ ರಸ್ತೆ ವಿಚಾರವಾಗಿ 45 ದಿನಗಳಲ್ಲಿ ಸಾರ್ವಜನಿಕ ಟೆಂಡರ್ ಕರೆಯಲು ಸಿದ್ಧತೆ
ಬೆಂಗಳೂರು: “ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ 190 ಕಿ.ಮೀ ನಷ್ಟು ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಿದ್ದು, 8 ಕಂಪನಿಗಳು ಇದಕ್ಕೆ ಅರ್ಹತೆ ಪಡೆದುಕೊಂಡಿವೆ. ಈ ಕಂಪನಿಗಳು ಕಾರ್ಯಸಾಧ್ಯತಾ ವರದಿ ಸಲ್ಲಿಸಲಿದ್ದು, 45 ದಿನಗಳ ಒಳಗಾಗಿ ಸಾರ್ವಜನಿಕ ಟೆಂಡರ್ ಕರೆಯಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.