work

ರೋಗಿಗಳ ಆರೈಕೆಯಲ್ಲಿ ವೈದ್ಯರ ಪಾತ್ರ ಅನನ್ಯ – ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು: ರೋಗಿಗಳ ರಕ್ಷಣೆಯಲ್ಲಿ ವೈದ್ಯರ ಪಾತ್ರ ಅನನ್ಯ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಮತ್ತು ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಡಿ.31ರಂದು 5 ಕೋಟಿ ರೂ. ಅರಣ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ದಾವಣಗೆರೆ : ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ (ಎಸ್.ಎಫ್.ಓ.)ಗಳನ್ನು ನಿಯೋಜಿಸುವುದಾಗಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಪಕ್ಷ ಸ್ಥಾನದ ಕೆಲಸ ನಿಮ್ಮಿಂದ ಕಲಿಯಬೇಕಿಲ್ಲ ಎಂದು ಸಿಎಂಗೆ ಹೆಚ್ಡಿಕೆ ತಿರುಗೇಟು

ಹಾಸನ: ಕದ್ದ ಮಾಲು ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡು ಶೋಕಿ ಮಾಡಿದ ನೀವು ನನ್ನ ಬಗ್ಗೆ ಮಾತನಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಜನ ಏನು ತೀರ್ಪು ನೀಡಬೇಕೋ ನೀಡಿದ್ದಾರೆ, ನಮಗೆ ಮಾಡಲು ಕೆಲಸ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಜೆಜೆಎಂ ಕಾಮಗಾರಿ ಪರಿಶೀಲಿಸಿದ ತಾ.ಪಂ ಇಓ

ಕೊಪ್ಪಳ: ಕಾರಟಗಿ ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ಅನುಷ್ಠಾನಗೊಂಡ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯ ಸ್ಥಳಕ್ಕೆ ಶುಕ್ರವಾರದಂದು‌ ಭೇಟಿ ನೀಡಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್ ರವರು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜೆಜೆಎಂ ಕಾಮಗಾರಿಯನ್ನು ಗ್ರಾಮದ ವಿವಿಧ ವಾರ್ಡ್ ಗಳಲ್ಲಿ ಅನುಷ್ಠಾನಗೊಳಸಲಾಗಿದ್ದು ಕಾಮಗಾರಿ ಗುಣಮಟ್ಟದ ಕಾಪಾಡುವಂತೆ ಸಂಭಂದಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ಹಾಗೇ ಮನೆ‌ ಮನೆಗೆ ಭೇಟಿ ನೀಡಿ‌ ಅಳವಡಿಸಿರುವ ನಲ್ಲಿ, ಮೀಟರ್ ಗಳನ್ನು …

ಜೆಜೆಎಂ ಕಾಮಗಾರಿ ಪರಿಶೀಲಿಸಿದ ತಾ.ಪಂ ಇಓ Read More »

ಕಳಪೆ ಕಾಮಗಾರಿ ಮಾಡಿದರೆ ಕಪ್ಪು ಪಟ್ಟಿ ಸೇರಿಸುವ ಎಚ್ಚರಿಕೆ: ಶಾಸಕ ನಿಸರ್ಗ ನಾರಾಯಣಸ್ವಾಮಿ

ದೇವನಹಳ್ಳಿ: ಸರ್ಕಾರದಿಂದ ಬರುವ ಅನುದಾನ ಸಾರ್ವಜನಿಕರ ಸದುಪಯೋಗಕ್ಕಾಗಿ ಇದ್ದು, ಕಾಮಗಾರಿಗಳ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಿ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು. ವಿಜಯಪುರ ಪುರಸಭೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿನ 15 ನೇ ಹಣಕಾಸು ಯೋಜನೆಯಲ್ಲಿ ಮಂಜೂರಾದ ವಾರ್ಡ್ ನಂಬರ್ 3 , 11, 12 , 17 ರಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ …

ಕಳಪೆ ಕಾಮಗಾರಿ ಮಾಡಿದರೆ ಕಪ್ಪು ಪಟ್ಟಿ ಸೇರಿಸುವ ಎಚ್ಚರಿಕೆ: ಶಾಸಕ ನಿಸರ್ಗ ನಾರಾಯಣಸ್ವಾಮಿ Read More »

ಧರ್ಮಸ್ಥಳ ಸಂಘದಿಂದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

ಮರಿಯಮ್ಮನಹಳ್ಳಿ:.ಮಾ.14 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇವರ ಆರ್ಥಿಕ ಸಹಕಾರದೊಂದಿಗೆ ಗ್ರಾಮ ಪಂಚಾಯತ್ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಡಣಾಪುರ ಅವರ ಸಹಭಾಗಿತ್ವದಲ್ಲಿ  ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಪಟ್ಟಣ ಸಮೀಪದ ಡಣಾಪುರ ಕೆರೆ(ಗೋಕಟ್ಟೆ)ಯನ್ನು ಹೂಳೆತ್ತವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಡಣಾಪುರ ಗ್ರಾ.ಪಂ.ಅಧ್ಯಕ್ಷೆ ಉಮಾದೇವಿ ಸಿಡಿ ಯಲ್ಲಪ್ಪ, ಕಾರ್ಯದರ್ಶಿ ಎನ್ ಮಂಜುನಾಥ,  ಹನುಮಂತಪ್ಪ, ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾಯೋಜನಾಧಿಕಾರಿ ಚಿದಾನಂದ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ವಲಯ ಒಕ್ಕೂಟದ ಮೇಲ್ವಿಚಾರಕಿ ಅಂಜಲಿ, ಪ್ರತಿನಿಧಿ ಉಮಾದೇವಿ ಇತರರು ಇದ್ದರು. 

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು.ಜನವರಿ,17 : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000-00 ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ …

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ Read More »

ಲಕ್ಷಾಂತರ ಉದ್ಯೋಗ ನಷ್ಟ ತಪ್ಪಿಸಿ

ಬೆಂಗಳೂರು, ಜ, 10; ರಾಜ್ಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕಲ್ಲು ಗಣಿಗುತ್ತಿಗೆ ನಿಯಮಗಳು ಮತ್ತು ಜಲ್ಲಿ ಕ್ರಷರ್‍ ಗಳ ಸಮಸ್ಯೆಗಳು ಗಂಭೀರವಾಗಿದ್ದು, ಸರ್ಕಾರ ತಕ್ಷಣವೇ ಇವುಗಳನ್ನು ಬಗೆಹರಿಸದಿದ್ದರೆ ಬಂಡವಾಳ ಹೂಡಿರುವ ಮಾಲೀಕರು ತೀರಾ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಈ ಉದ್ಯಮ ನಂಬಿರುವವರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಫೆಡರೇಷನ್ ಆಫ್ ಕರ್ನಾಟಕ ಸ್ಟೋನ್ಸ್ ಅಂಡ್ ಕ್ರಷರ್ಸ್ ಅಸೋಷಿಯೇಷನ್ ಎಚ್ಚರಿಕೆ ನೀಡಿದೆ. ಸರ್ಕಾರ ವಿಳಂಬ ಧೋರಣೆ ಮುಂದುವರೆಸಿದರೆ ಸಿಮೆಂಟ್ ಮತ್ತು ಕಬ್ಬಿಣದ ಉದ್ಯಮದ ಮಾದರಿಯಲ್ಲಿ ಈ ವಲಯಗಳು ಕೂಡ ಬಹುರಾಷ್ಟ್ರೀಯರ …

ಲಕ್ಷಾಂತರ ಉದ್ಯೋಗ ನಷ್ಟ ತಪ್ಪಿಸಿ Read More »

ಗುಣಮಟ್ಟದ ಕಾಮಗಾರಿಗೆ ಆದ್ಯತೆ

ದೇವನಹಳ್ಳಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಸುಮಾರು 3 ಕೋಟಿ ಅಂದಾಜು ವೆಚ್ಚದಲ್ಲಿ 5 ಹೋಬಳಿಗಳಿಗೂ ತಲಾ 60 ಲಕ್ಷ ರೂಗಳ ಕಾಮಗಾರಿಗೆ ಇಂದು ಕುಂದಾಣ ಹೋಬಳಿಯ ಗ್ರಾಮಗಳಿಗೆ ಸಿ.ಸಿ.ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ್ದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ದಾಸರಹಳ್ಳಿ, ಮಾಯಸಂದ್ರ, ಮನುಗೊಂಡನಹಳ್ಳಿ, ಶಾನಪ್ಪನಹಳ್ಳಿ, ದೊಡ್ಡಗೊಳಹಳ್ಳಿ , ಸೀಕಾಯನಹಳ್ಳಿ, ಸೋಲೂರು, ಬ್ಯಾಡ್ರಹಳ್ಳಿ, ಬಿದಲೂರು, ಅಣಿಘಟ್ಟ ಗ್ರಾಮಗಳಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ …

ಗುಣಮಟ್ಟದ ಕಾಮಗಾರಿಗೆ ಆದ್ಯತೆ Read More »

Translate »
Scroll to Top