ಬಾಗಲಕೋಟೆ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪರ‍್ಟ್ ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ,
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರಜ್ವಲ್ ಅವರ ಪಾಸ್ ಪರ‍್ಟ್ ರದ್ದು ಪಡಿಸುವಂತ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಪಾಸ್ ಪರ‍್ಟ್ ರದ್ದು ಮಾಡಿದ ಮೇಲೆ ಆತ ವಿದೇಶದಲ್ಲಿರಲು ಸಾಧ್ಯವಿಲ್ಲ. ಮೊದಲು ಮೋದಿ ಪಾಸ್ ಪರ‍್ಟ್ ಕ್ಯಾನ್ಸರ್ ಮಾಡಲಿ. ನಂತರ ನಂತರ ತನಿಖಾ ಸಂಸ್ಥೆ ಪ್ರಜ್ವಲ್‌ನನ್ನು ಭಾರತಕ್ಕೆ ಕರೆತರಲಿದೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಕೇವಲ ಲೈಂಗಿಕ ದರ‍್ಜನ್ಯ ಎಸಗಿಲ್ಲ. ರೇಪ್ ಮಾಡಿದ್ದಾನೆ. ಆತನ ವಿರುದ್ದ ರೇಪ್ ಕೇಸ್ ದಾಖಲಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆಯರು ಸುಳ್ಳು ಹೇಳುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ. ಅದರಲ್ಲೂ ವಿವಾಹಿತ ಮಹಿಳೆ ಅತ್ಯಾಚಾರದ ದೂರು ನೀಡಿದರೆ ಅದನ್ನು ನಂಬಲೇಬೇಕು. ಆದರೆ, ಕೇಂದ್ರ ರ‍್ಕಾರ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಪ್ರಜ್ವಲ್ ಎಲ್ಲಿಯೇ ಎಸ್ಕೇಪ್ ಆಗಿರಲಿ. ಯಾವ ದೇಶದಲ್ಲಿದ್ದರೂ ಹಿಡಿದುಕೊಂಡು ಬರುತ್ತೇವೆಂದು ಗುಡುಗಿದರು.
ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾದವರನ್ನು ಪತ್ತೆ ಹಚ್ಚಲು ಸಂಬಂಧಪಟ್ಟ ಅಧಿಕಾರಿಗಳಿಗೆ ನರ‍್ದೇಶನ ನೀಡಲಾಗಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಲಾಗಿದೆ ಎಂದು ಹೇಳಿದರು.
ಬಳಿಕ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ ಅವರು, ಚುನಾವಣಾ ಪ್ರಚಾರದಲ್ಲಿ ರೇವಣ್ಣನ ಮಗ ಬೇರೆಯಲ್ಲ, ನನ್ನ ಮಗ ಬೇರಯಲ್ಲ ಅಂತಿದ್ದ ಕುಮಾರಸ್ವಾಮಿ, ಈಗ ನಾವು ಬೇರೆ, ಅವರು ಬೇರೆ ಎನ್ನುತ್ತಿದ್ದಾರೆ. ರೇವಣ್ಣ ಕುಟುಂಬ ಬೇರೆ, ನಾವು ಬೇರೆ ಅಂತಿದ್ದಾರೆ. ಹಾಗಿದ್ದರೆ, ದೇವೇಗೌಡರು ಹಾಗೂ ಕುಮಾರಸ್ವಾಮಿ ವಕೀಲರ ಜೊತೆಗ ಏಕೆ ರ‍್ಚೆ ಮಾಡಿದ್ದಾರೆ? ಲಾಯರ್ ಗಳನ್ನು ಯಾಕೆ ಕರೆಸುತ್ತಿದ್ದಾರೆ. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದು ಒಟ್ಟಿಗೆ, ತಪ್ಪು ಮಾಡೋದು ಒಟ್ಟಿಗೆ ಎಂದು ಹರಿಹಾಯ್ದರು.
ಪ್ರಜ್ವಲ್ ವಿಷಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಮೊದಲೇ ಗೊತ್ತಿತ್ತು. ಪ್ರಜ್ವಲ್ ರೇವಣ್ ಅವರ ವಿಡಿಯೋಗಳು ಇವೆ ಎಂಬುದು ಗೊತ್ತಿತ್ತು. ಆದರೂ, ಬಿಜೆಪಿಯವರು ಪ್ರಜ್ವಲ್ ಗೆ ಸೀಟು ಬಿಟ್ಟುಕೊಟ್ಟರು. ಪ್ರಜ್ವಲ್ ವಿಡಿಯೋ ಬಗ್ಗೆ ಗೊತ್ತಿದ್ದರೂ ಯಾಕೆ ಮೈತ್ರಿ ಮಾಡಿಕೊಂಡರು? ಪ್ರಕರಣದ ಬಗ್ಗೆ ತಮ್ಮ ನಿಲುವು ಏನು ಎಂಬುದನ್ನು ಬಿಜೆಪಿಯವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು.
ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದ ಅವರು, ಅಧಿಕಾರ ಉಳಿಸಿಕೊಳ್ಳಲು, ಬಿಜೆಪಿ ಮಾಡಬಾರದ್ದನ್ನು ಮಾಡುತ್ತಿದೆ. ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ. ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.