ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಉತ್ತರ ರ‍್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅರ‍್ಟ್ ಹಾಗೂ ಕಲಬರ‍್ಗಿ, ಚಿತ್ರದರ‍್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ ೪೬.೭ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಕಲಬುರಗಿ ಜಿಲ್ಲೆಯಲ್ಲಿ ಕಳೆದ ೪ ದಿನದಿಂದ ಉಷ್ಣ ಅಲೆಗಳು ರಾಚುತ್ತಿವೆ. ಮಧ್ಯಾಹ್ನ ೧೨ ರಿಂದ ಸಂಜೆ ೩ ಟೆಯವರೆಗೂ ಹೊರಗಡೆ ಹೋಗದೆ ನೆರಳಲ್ಲಿ ಇರುವಂತೆ. ಸರ‍್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಸಂರಕ್ಷಣಾ ಸಲಹೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜಿಲ್ಲೆಯ ಜನತೆಗೆ ಮನವಿ ಮಾಡಿದೆ.
ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಆಗಾಗ್ಗೆ ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಒಳಾಂಗಣದಲ್ಲೇ ಇರಬೇಕು, ವಿಶೇಷವಾಗಿ ಮಕ್ಕಳು, ಹಿರಿಯರು, ಮಧುಮೇಹ ಹಾಗೂ ಬಿಪಿ ಇರುವವರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೋರಿದೆ.
ಇನ್ನು ಕಲ್ಯಾಣ ಕರ್ನಾಟಕದಲ್ಲಿ ಬಿಸಿಲಿನ ಪ್ರತಾಪ ಜನರ ಬದುಕು ಹೈರಾಣಾಗಿಸಿದ್ದು, ಬಿಸಿಲು ಎಷ್ಟಿದೆ ಎನ್ನುವುದನ್ನು ತೋರಿಸಲು ಇಲ್ಲಿನ ಜನ ಬೆಂಕಿ ಹಚ್ಚದೆಯೇ ಕಬ್ಬಿಣದ ಕಡಾಯಿಯ ಮೇಲೆ ಮೊಟ್ಟೆಯ ಆಮ್ಲೆಟ್ ಮಾಡಿದ ಫೋಟೋ, ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.