ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಗೆ ಸೋಲಾಗಿದ್ದು, ಫಲಿತಾಂಶ ಪ್ರಕಟ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದಿರುವ ಡಾ. ಮಂಜುನಾಥ್ ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾಗಿ ಕಣಕ್ಕಿಳಿದಿದ್ದರು.
ಎರಡು ಬಾರಿ ಸಂಸದರಾಗಿರುವ ಡಿಕೆ ಸುರೇಶ್ ಹ್ಯಾಟ್ರಿಕ್ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದರು. ಆದರೆ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದ್ದು, ಇಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಸಿ.ಎನ್. ಮಂಜುನಾಥ್ 8,82,186 ಮತಗಳನ್ನು ಪಡೆದಿದ್ದು, ಡಿ.ಕೆ. ಸುರೇಶ್ 6,82,207 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಡಾ.ಸಿ.ಎನ್. ಮಂಜುನಾಥ್ 1,99,979 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಿರಾಮ ಕೊಟ್ಟ ಮತದಾರ ಪ್ರಭುಗಳಿಗೆ ಧನ್ಯವಾದ
ಫಲಿತಾಂಶ ಪ್ರಕಟ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಸುರೇಶ್, ”ವಿರಾಮ ಕೊಟ್ಟ ಮತದಾರ ಪ್ರಭುಗಳಿಗೆ ಧನ್ಯವಾದ. ಮತದಾರ ಪ್ರಭುಗಳು ಕೊಟ್ಟಿರುವ ತರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕರ್ಜುನ ರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ.
ಹೊಸ ಸಂಸದರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತರ್ಮಾನ ಕೊಟ್ಟಿದ್ದಾರೆ ಎಂದರು.
ಅಂತೆಯೇ ರಾಜಕೀಯದಲ್ಲಿ ತಂತ್ರ ಕುತಂತ್ರ ಕೆಲಸ ಮಾಡುತ್ತದೆ. ಅದನ್ನೇ ಮಾಡಿದ್ದಾರೆ. ನಾನು ಕರ್ಯರ್ತರ ಜೊತೆ ಇದ್ದವನು. ಈಗಲೂ ಅವರ ಜತೆ ಇರುತ್ತೇನೆ. ನನ್ನ ಹೋರಾಟ ಮುಂದುವರಿಯಲಿದೆ. ಆದಾಗ್ಯೂ ದೇಶದಲ್ಲಿ ಇಂಡಿಯಾ ಒಕ್ಕೂಟಕ್ಕೆ ಒಳ್ಳೆಯ ಸಂಖ್ಯೆ ಬಂದಿದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿತ್ತು. ಮಾಧ್ಯಮಗಳ ಸಮೀಕ್ಷೆಗಳೂ ಹಾಗೆ ಹೇಳಿದ್ದವು. ಆದರೆ, ಅವುಗಳೆಲ್ಲ ಸುಳ್ಳಾಗಿವೆ ಎಂದರು.