ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಪೂರ್ವ ಪ್ರವೇಶ ದ್ವಾರದಲ್ಲಿ ನಿನ್ನೆಯಿಂದ ನಡೆಯುತ್ತಿರುವ 24 ತಾಸುಗಳ ಅಹೋರಾತ್ರಿ ಧರಣಿ ಭಾಗವಾಗಿ ಇಂದೂ ಪ್ರತಿಭಟನೆ ಮುಂದುವರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮುಖಂಡರಾದ ಪ್ರಕಾಶ್ ರಾಥೋಡ್, ನಾಸೀರ್ ಅಹ್ಮದ್, ವಿ.ಎಸ್. ಉಗ್ರಪ್ಪ, ಲಕ್ಷ್ಮೀನಾರಾಯಣ, ರಾಮಚಂದ್ರಪ್ಪ, ಪದ್ಮಾವತಿ, ರಾಜಕುಮಾರ್ ಮತ್ತಿತರರು ಪಾಲ್ಗೊಂಡರು.

