ತಂದೆ ಜತೆಗೆ ಕಾರ್ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಬೆಂಗಳೂರು: ಒಂದು ಸಣ್ಣ ನರ‍್ಲಕ್ಷ್ಯಕ್ಕೆ ೫ ರ‍್ಷದ ಮಗುವೊಂದು ಕಾರು ಅಪಘಾತದಲ್ಲಿ ದರ‍್ಮರಣ ಹೊಂದಿದೆ. ಆರವ್ (5) ಮೃತ ದರ‍್ದೈವಿ. ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ತಂದೆ ಜತೆಗೆ ಕಾರು ವಾಶ್‌ ಮಾಡುವಾಗ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದಾನೆ. ಪರಿಣಾಮ ಕಾರು ಹೋಗಿ ಮನೆಯಾಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಗುದ್ದಿದೆ. ಘಟನೆಯಲ್ಲಿ ಐದು ರ‍್ಷ ಮಗು ಆರವ್ ಅಪ್ಪಚ್ಚಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಂದು (ಭಾನುವಾರ) ಬೆಳಗ್ಗೆ ೧೦.೩೦ರ ಸುಮಾರಿಗೆ ಈ ದುರಂತ ನಡೆದಿದೆ. 15 ರ‍್ಷದ ಬಾಲಕನರ‍್ವ ತಂದೆಯ ಜತೆ ಕಾರ್ ವಾಶ್ ಮಾಡುತ್ತಿದ್ದ. ಇದೇ ವೇಳೆ ಕಾರಿನ ಡ್ರೈವಿಂಗ್‌ ಸೀಟ್‌ನಲ್ಲಿ ಕುಳಿತ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ. ಪರಿಣಾಮ ಕಾರು ರಭಸವಾಗಿ ಚಲಿಸಿದೆ. ಅಲ್ಲೇ ಕಾರ್ ಬಳಿ ಆಟವಾಡುತ್ತಿದ್ದ ೫ ರ‍್ಷದ ಆರವ್ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಆರವ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಸದ್ಯ ಮೃತದೇಹವನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು,. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಘಟನೆಯಲ್ಲಿ ಮಗುವಿಗೆ ಗುದ್ದಿ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳಿಗೂ ಕಾರು ಗುದ್ದಿದೆ ಎಂದು ತಿಳಿದುಬಂದಿದೆ.

 

ಸಿಬ್ಬಂದಿಯೊಬ್ಬರ ಸಂಬಂಧಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತಂದೆ ಕಾರು ವಾಶ್ ಮಾಡುವಾಗ ಎಕ್ಸ್ಲೇಟರ್ ತುಳಿದು ಅಪಘಾತ ಮಾಡಿರುವ ೧೫ ರ‍್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top