ದೇಶದ ಗತಿ ಶಕ್ತಿಯನ್ನು ಬದಲಾಯಿಸಲಿರುವ ಬಜೆಟ್

ಬೆಂಗಳೂರು ಫೆಬ್ರವರಿ 1: ಇಂದು ಕೇಂದ್ರ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ ನಮ್ಮ ದೇಶದ ಆರ್ಥಿಕತೆಗೆ ಬೂಸ್ಟರ್‌ ನೀಡುವ ಡೋಸ್‌ ಆಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಖ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಪ್ರತಿಕ್ರಿಯಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಉಲ್ಲೇಖಿಸಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವದಲ್ಲಿ ನಾವುಗಳು ಅಭಿವೃದ್ದಿಯ ಅಮೃತ ಕಾಲಕ್ಕೆ ಸಾಕ್ಷೀಯಾಗಿದ್ದೇವೆ. ಮುಂದಿನ 25 ವರ್ಷಗಳ ಅಭಿವೃದ್ದಿಯ ನೀಲಿನಕ್ಷೆಯನ್ನು ವಿತ್ತ ಸಚಿವರು ನೀಡಿದ್ದಾರೆ.

ಹೆದ್ದಾರಿ ಜಾಲವನ್ನ 25 ಸಾವಿರ ಕಿಲೋಮೀಟರ್‌ಗಳಷ್ಟು ವಿಸ್ತರಿಸುವುದು, ದೇಶದ 5 ನದಿಗಳನ್ನು ಜೋಡಿಸುವ ವಿಸ್ತ್ರುತ ಯೋಜನೆಯನ್ನು ಅಂತಿಮಗೊಳಿಸಿರುವುದು, ನೈಸರ್ಗಿಕ ಕೃಷಿಗೆ ಒತ್ತು ನೀಡುವಂತಹ ಮಹತ್ವದ ಅಂಶಗಳನ್ನು ಆಯವ್ಯಯದಲ್ಲಿ ತಿಳಿಸಿದ್ದಾರೆ. ಹಾಗೆಯೇ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ, ತರಗತಿಗೊಂದು ಟಿವಿ ಚಾನಲ್ ನ ಪ್ರಸ್ಥಾವನೆ, ಪ್ರಾದೇಶಿಕ ಭಾಷೆಗಳೂ ಸೇರಿ 200 ಹೊಸ ಚಾನಲ್ ಆರಂಭಕ್ಕೆ ಪ್ರಸ್ತಾಪ, ಶಿಕ್ಷಕರುಗಳಿಗೆ ಡಿಜಿಟಲ್‌ ಟೂಲ್ಸ್‌ಗಳ ನೀಡುವಿಕೆ ಹೀಗೆ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೂ ಒತ್ತು ನೀಡಲಾಗಿದೆ. 2 ಲಕ್ಷ ಅಂಗನವಾಡಿಗಳ ಉನ್ನತೀಕರಣದಿಂದ ನಮ್ಮ ದೇಶದ ಮಕ್ಕಳಿಗೆ ಅತ್ಯುತ್ತಮ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆಯಲಿದೆ. ಡಿಜಿಟಲ್‌ ಬ್ಯಾಂಕಿಂಗ್‌ ವ್ಯವಸ್ಥೆಗೆ ಒತ್ತು. ಮಹಿಳಾ ಮತ್ತು ಮಕ್ಕಳ ಅಭ್ಯದಯಕ್ಕೂ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಭವಿಷ್ಯದಲ್ಲಿ ಭಾರತ ದೇಶವನ್ನು ತಾಂತ್ರಿಕವಾಗಿ ಮತ್ತಷ್ಟು ಮೇಲ್ದರ್ಜೆಗೇರಿಸುವ ಮೂಲಕ ಎಲ್ಲಾ ವರ್ಗದ ಅಭ್ಯುದಯಕ್ಕೆ ಆದ್ಯತೆ ನೀಡಿರುವ ಬಜೆಟ್‌ ಇದಾಗಿದೆ ಎಂದು ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top