ದೇವನಹಳ್ಳಿ,ಜ,3 : ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು ಇಡೀ ವಿಶ್ವದಲ್ಲಿ ಸ್ವತಂತ್ರವಾದ ಅನೇಕ ದೇಶಗಳು ಸಾರ್ವಜನಿಕರ ಹಕ್ಕುಗಳನ್ನು ಕಾಪಾಡಲು ಅಸಮರ್ಥವಾಗಿವೆ ಎಂಬ ಹಿನ್ನೆಲೆಯಲ್ಲಿ ಭಾರತದ ಈ ಸಂವಿಧಾನ ಎದ್ದು ಕಾಣುತ್ತದೆ ಹಾಗೂ ಇದಕ್ಕೆ ಡಾ. ಅಂಬೇಡ್ಕರ್ ಕೊಡುಗೆ ಶ್ರಮ ಅಪಾರ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು. ದೇವನಹಳ್ಳಿ ಪಟ್ಟಣದ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಭಾರತ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆ ಸಮಾರಂಭದಲ್ಲಿ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಆಗಿನಿಂದಲೇ ಮತಾಂತರದ ಬಗ್ಗೆ ಗಂಭೀರ ಚಿಂತನೆ ನಡೆಸಿ, ಅಸ್ಪೃಶ್ಯರಿಗೆ ಹಿಂದೂಧರ್ಮ ದಲ್ಲಿ ಏಳಿಗೆಯಿಲ್ಲವಾದ್ದರಿಂದ ಮತಾಂತರ ಅನಿವಾರ್ಯ, ಹಾಗೂ ಬೌದ್ಧ ಧರ್ಮ ಮತಾಂತರದ ನಿರ್ಣಯ ಕೈಗೊಂಡರು.ವಿದ್ಯಾರ್ಥಿ ದಿಸೆಯಲ್ಲಿ ಅನೇಕ ಕಷ್ಟಗಳು ಅನುಭವಿಸಿ ಉನ್ಬತ ಮಟ್ಟಕ್ಕೆ ಏರಿದ ಮಹಾನ್ ನಾಯಕ ಅಂಬೇಡ್ಕರ್ ಎಂದು ತಿಳಿಸಿದರು.
ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಎರಡರಿಂದಲೂ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಗಳಿಸಿದರು , ಕಾನೂನು, ಅರ್ಥಶಾಸ್ತ್ರ ಮತ್ತು ರಾಜಕೀಯ ವಿಜ್ಞಾನದಲ್ಲಿ ತಮ್ಮ ಸಂಶೋಧನೆಗಾಗಿ ವಿದ್ವಾಂಸರಾಗಿ ಖ್ಯಾತಿಯನ್ನು ಗಳಿಸಿದರು. ದಲಿತರಿಗೆ ರಾಜಕೀಯ ಹಕ್ಕುಗಳು ಮತ್ತು ಸಾಮಾಜಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದರು . ಹಿಂದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮನ್ನು ಬಡತನ, ಅಜ್ಞಾನ ಕಾಡುತ್ತಿತ್ತು ಆದರೆ ಇಂದು ಭ್ರಷ್ಟಾಚಾರ, ಅಸಮಾನತೆ , ಕೋಮುವಾದ, ಭಯೋತ್ಪಾದಕತೆ ಕಾಡುತ್ತಿದೆ ಇದನ್ನು ಮೆಟ್ಟಿ ಪ್ರಶ್ನೆ ಮಾಡಲು ಇಂದಿನ ಯುವ ಪೀಳಿಗೆ ಸಮಾಜದ ಸಾಧಕರ ವಿಚಾರಧಾರೆಗಳನ್ನು ತಿಳಿಯಬೇಕು ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ವಕೀಲರಾದ ಮಹೇಶ್ ದಾಸ್ ತಿಳಿಸಿದರು. ಇಂದಿನ ಯುವ ಪೀಳಿಗೆ ತಮ್ಮ ಜೀವನದ ಆದರ್ಶ ವ್ಯಕ್ತಿಗಳನ್ನು ಆಯ್ಕೆ ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕು ಸಿನಿಮಾ ಹೀರೋ ಎಂದಿಗೂ ನಿಜ ಜೀವನದ ನಾಯಕನಾಗಲು ಸಾಧ್ಯವಿಲ್ಲಾ ದೇಶದ ಮಹಾನ್ ನಾಯಕರುಗಳನ್ನು ಆದರ್ಶವಾಗಿಟ್ಟುಕೊಳ್ಳಬೇಕು ಹಾಗೂ ತಮ್ಮ ತಂದೆ ತಾಯಿಯರ ಕನಸನ್ನು ಮತ್ತು ಗುರುಹಿರಿಯರ ನಿರೀಕ್ಷೆಯನ್ನು ಜೀವಂತಗೊಳಿಸುವ ಕೆಲಸ ಮಾಡಬೇಕೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಆರ್.ಕೆ.ನಂಜೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕೋಶಾಧ್ಯಕ್ಷ ಅಶ್ವಥ್ ಗೌಡ, ಗಾಯಕ ವಾಸುದೇವ್, ಕಾಲೇಜು ಪ್ರಾಂಶುಪಾಲ ರಾಘವೇಂದ್ರ, ಮಂಜುನಾಥ್, ಭೋಧಕ ವೃಂದ ವಿದ್ಯಾರ್ಥಿಗಳು ಇದ್ದರು.