ಬಳ್ಳಾರಿ, ಮಾ.15: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಎಸ್ಸಿಪಿ/ಟಿಎಸ್ಪಿ ಅನುದಾನದಡಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಎತ್ತಿನಬೂದಿಹಾಳ ಗ್ರಾಮ, ಶಂಕರಬಂಡೆ,ವಿಘ್ನೇಶ್ವರ ಕ್ಯಾಂಪ್,ತೊಲಮಾಮಡಿ ಗ್ರಾಮದ ಪ್ರಗತಿ ಕಾಲೋನಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳ ಭೂಮಿಪೂಜೆಯನ್ನು ನೇರವೇರಿಸಿದರು.


ಶಿಡಗಿನಮೋಳ ಗ್ರಾಮದಲ್ಲಿ ಜಿಲ್ಲಾ ಖನಿಜ ನಿಧಿ ಅಡಿ ಕೈಗೆತ್ತಿಕೊಂಡಿರುವ ಸರಕಾರಿ ಶಾಲಾ ಕಟ್ಟಡದ ಭೂಮಿಪೂಜೆ ನೆರವೇರಿಸಿದರು. ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಮುಗಿಸುವಂತೆ ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ, ಮುಖಂಡರಾದ ಗುರುಲಿಂಗನಗೌಡ,ಒಬಳೇಶ,ಅಧಿಕಾರಿಗಳು ಇದ್ದರು.
