ಸರ್ಕಾರದ ಮೊದಲ ಆದ್ಯತೆ ಜನರ ಪ್ರಾಣ ರಕ್ಷಣೆ ಮಾಡುವುದು

ಬೆಂಗಳೂರು,ಜನವರಿ,೧೯ : ಸರ್ಕಾರದ ಮೊದಲ ಆದ್ಯತೆ ಜನರ ಪ್ರಾಣ ರಕ್ಷಣೆ ಮಾಡುವುದು ಎಂದು ಸುಧಾಕರ್ ತಿಳಿಸಿದರು. ಶುಕ್ರವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿಯವರು ಜನಪರವಾದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಅಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮಾಧ್ಯಮಗಳಿಗೆ ಹೇಳಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಪ್ರಾಣ ರಕ್ಷಣೆ ಹಾಗೂ ಜೀವನ ನಿರ್ವಹಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜನಪರವಾದ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ. ಪ್ರತಿಯೊಬ್ಬರ ಪ್ರಾಣ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದರು.

ನಮ್ಮ ಸರ್ಕಾರ ಜನರಿಗೆ ತೊಂದರೆ ಕೊಟ್ಟು ಲಾಕ್‌ಡೌನ್ ಇಲ್ಲವೇ ಕಫ್ರ್ಯೂ ವಿಧಿಸುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಒಂದಿಷ್ಟು ಕಠಿಣ ಕ್ರಮಗಳ ಅನಿವಾರ್ಯ ಇದೆ ಎಂದು ತಿಳಿಸಿದರು.

ಮೊದಲನೆಯದಾಗಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜನರ ಜೀವವನ್ನು ಉಳಿಸುವುದು, ಜನರ ಜೀವನಕ್ಕೆ ಕುಂದುಕೊರತೆಗಳು ಆಗದಂತೆ ನೋಡಿಕೊಳ್ಳುವುದು, ೨ನೇಯದಾಗಿ ಸರ್ಕಾರದ ನಿರ್ಧಾರಗಳಿಂದ ಜನರ ಜೀವನಕ್ಕೆ ಸಮಸ್ಯೆಯಾಗಬಾರದು. ಹೀಗಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜನರಿಗೆ ತೊಂದರೆಯಾಗುವ ರೀತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇತರೆ ರಾಜ್ಯಗಳಲ್ಲಿ ಯಾವ ರೀತಿ ಸೋಂಕು ಹಬ್ಬುತ್ತದೆ ಎಂಬುದನ್ನು ತಜ್ಞರು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ನೀಡುತ್ತಿದ್ದಾರೆ. ಅದನ್ನು ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ. ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

Leave a Comment

Your email address will not be published. Required fields are marked *

Translate »
Scroll to Top