ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲರು

ಬಳ್ಳಾರಿ: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಅವರು ಗುರುವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯವನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದರು.  ಬಳಿಕ ವಿಶ್ವವಿದ್ಯಾಲದ ಆವರಣದಲ್ಲಿ ಸಂಪಿಗೆ ಗಿಡಗಳನ್ನು ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಮಾಜಿ ಮೇಯರ್ ಎಂ.ರಾಜೇಶ್ವರಿ, ಐಜಿಪಿ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಕುಲಪತಿ ಪ್ರೊ.ಸಿದ್ದು ಪಿ ಆಲಗೂರು ಸೇರಿದಂತೆ ವಿವಿಯ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು ಹಾಗೂ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top