ಸಚಿವರು ಇಂದೂ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ

ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುತ್ತಿದ್ದೇವೆ. ಭಾರತದ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದು ಮೂಲಭೂತ ಹಕ್ಕು ಎಂದು ಸಂವಿಧಾನದ ವಿಧಿ 51ಎ ಹೇಳುತ್ತದೆ. ಜನಪ್ರತಿನಿಧಿಗಳಾಗಿ, ಭಾರತೀಯರಾಗಿ ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಎಸಗುವ ಯಾವ ತಪ್ಪನ್ನೂ ಮಾಡಿಲ್ಲ. ಸಚಿವರೇ ತಾವು ಕೇಸರಿ ಧ್ವಜ, ಶಾಲನ್ನು ಸೂರತ್‌ನಿಂದ ತರಿಸಿ ಹಂಚಿದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಚಿವರು ಇಂದೂ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕನಿಷ್ಠ ಪಕ್ಷ ಈಗಲಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ಮೌನವಾಗಿರುವುದು ಏಕೆ?ನಾಳೆ ಬೆಳಗ್ಗೆ ವಿಧಾನಸಭಾ ಕಲಾಪಗಳು ಆರಂಭವಾಗುವ ಮುನ್ನ ಮುಖ್ಯಮಂತ್ರಿಗಳು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೊಂದುವೇಳೆ ಕ್ರಮ ಕೈಗೊಳ್ಳದಿದ್ದರೆ ಸದನದ ಒಳಗೆ ಮತ್ತು ಹೊರಗೆ ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ.ಎಂದು ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top