ತಾಯಿ ಆಗುತ್ತಿರುವ ನಟಿ ಅಮೂಲ್ಯ ಜಗದಿಶ್

ಬಾಲ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಫೋಟೋಗಳನ್ನು ಪೋಸ್ಟ್ ಮಾಡುವ ಸಮೇತ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರು ಮೊದಲ ಮಗವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ನಟಿ ಅಮೂಲ್ಯ ವಿಶೇಷ ಫೋಟೋ ಮೂಲಕವೇ ಗುಡ್ ನ್ಯೂಸ್ ನೀಡಿದ್ದಾರೆ.

ಕನ್ನಡದ ಪ್ರಸಿದ್ಧ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್ ಎಂಬ ವಿಚಾರವನ್ನು ಪೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅವರು ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್ ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ಸೋಶಿಯಲ್ ಮೀಡಿಯಾ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅಮೂಲ್ಯ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಅವರ ಹೊಸ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ.

Leave a Comment

Your email address will not be published. Required fields are marked *

Translate »
Scroll to Top