ಹೆಣ್ಣುಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಎತ್ತಿ ಹಿಡಿಯಲಾಗಿದೆ

ಬೆಂಗಳೂರು,ಮಾ,15 : ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಎತ್ತಿಹಿಡಿದ ಹೈಕೋರ್ಟ್ ತೀರ್ಪನ್ನು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಸ್ವಾಗತಿಸಿದ್ದಾರೆ. ಮಾಧ್ಯಮ ಸದಸ್ಯರೊಂದಿಗೆ, ಇಂದು ಮಾತನಾಡಿದ ಸಚಿವರು, ಇದೊಂದು ಐತಿಹಾಸಿಕ ತೀರ್ಪು ಆಗಿದ್ದು, ಹೆಣ್ಣುಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಎತ್ತಿ ಹಿಡಿಯಲಾಗಿದೆ, ಎಂದರು. ಉಚ್ಚ ನ್ಯಾಯಲಯದ ಅದೇಶನವನ್ನು ಎಲ್ಲರೂ ಪಾಲಿಸಬೇಕು, ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ತೀರ್ಪಿನ ಹಿನ್ನಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುಂಜಾಗರೂತಾ ರಕ್ಷಣಾ ಕ್ರಮಗಳನ್ನು, ಕೈಗೊಳ್ಳಲಾಗಿದೆ, ಎಂದು ಸಚಿವರು, ತಿಳಿಸಿದರು.

Leave a Comment

Your email address will not be published. Required fields are marked *

Translate »
Scroll to Top