ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಪ್ರಮುಖ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು


ಬಳ್ಳಾರಿ: ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಪ್ರಮುಖವಾಗಿದ್ದು, ಪ್ರಕರಣಗಳನ್ನು ಬಗೆಹರಿಸುವುದರಲ್ಲಿ ಮತ್ತು ಮಾನವೀಯತೆಯಲ್ಲಿ ಕರ್ನಾಟಕ ಪೊಲೀಸ್ ರಾಷ್ಟ್ರದಲ್ಲೇ ಉತ್ತಮ ಪೊಲೀಸ್ ಪಡೆಯಾಗಿದೆ; ಇದು ನಮ್ಮ ಹೆಮ್ಮೆ ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.
ಜಿಲ್ಲೆಯ ಸಿರುಗುಪ್ಪ ಪಟ್ಟಣದ ಎಪಿಎಂಸಿ ಆವರಣದಲ್ಲಿ ಪೊಲೀಸ್ ಉಪ-ಅಧೀಕ್ಷಕರ ಕಚೇರಿಯನ್ನು ಗುರುವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರು ದೊಡ್ಡ ಜವಾಬ್ದಾರಿ ನಿಭಾಯಿಸುತ್ತಿದ್ದು,
ನೂತನ ಪೊಲೀಸ್ ಕಛೇರಿ ಉದ್ಘಾಟನೆಯೊಂದಿಗೆ ಜಿಲ್ಲೆಗೆ ಮತ್ತೊಂದು ವ್ಯವಸ್ಥೆಯ ಸೇರ್ಪಡೆ ಆಗಿದೆ. ಇದರಿಂದ ಜನರಿಗೆ ಇನ್ನ? ಉತ್ತಮ ಸೇವೆಗಳನ್ನು ಒದಗಿಸಬಹುದಾಗಿದೆ ಎಂದರು.


ಮನೆಗಳಲ್ಲಿ ತಪ್ಪುಗಳನ್ನ ಮಾಡಿದಾಗ ತಿದ್ದಿ, ತೀಡಿ ಸರಿ ದಾರಿ ತೋರಲು ತಂದೆ ತಾಯಿ ಇರುತ್ತಾರೆ, ಹಾಗೆಯೇ ಸಮಾಜದಲ್ಲಿ ತಪ್ಪುಗಳು ಆಗದಂತೆ ನೋಡಿಕೊಂಡು, ಶಾಂತಿ-ಸುವ್ಯವಸ್ಥೆ ಕಾಪಾಡುವ ಕೆಲಸ ಪೊಲೀಸರು ಮಾಡುತ್ತಾರೆ ಎಂದು ತಿಳಿಸಿದರು.
ಇವತ್ತು ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳಾ ದೌರ್ಜನ್ಯ ವಿ?ಯ ಹಾಗೂ ಪರಿಶಿ? ಜಾತಿ , ಪಂಗಡಗಳ ಮೇಲೆ ದೌರ್ಜನ್ಯ ಸೇರಿದಂತೆ ಯಾವುದೇ ಪ್ರಕರಣ ಕೈಗೆತ್ತಿಕೊಂಡಲ್ಲಿ ಅಪರಾಧಿಗಳಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಅಮಾಯಕರನ್ನು ಮೋಸ ಮಾಡುವ ಸೈಬರ್ ಕ್ರೈಮ್ ಪ್ರಕರಣಗಳು ಎಲ್ಲಾ ಕಡೆ ಹೆಚ್ಚುತ್ತಿದ್ದು, ಬ್ಯಾಂಕ್‌ನಿಂದ ಕಾಲ್ ಮಾಡ್ತಿದ್ದೇವೆ, ದಾಖಲೆ ಪರಿಶೀಲನೆ ಮಾಡ್ತಿದ್ದೇವೆ, ಓಟಿಪಿ ಕೊಡಿ ಅಂತ ಕಾಲ್ ಮಾಡಿ, ಅಮಾಯಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳನ್ನ ತಡೆಯಬೇಕಿದ್ದು, ಕ? ಪಟ್ಟು ದುಡಿಯುವ ಅಮಾಯಕರನ್ನ ಕಾಪಾಡುವ ಜವಾಬ್ದಾರಿ ಪೊಲೀಸರ ಮೇಲಿದೆ ಎಂದು ಹೇಳಿದರು.


ಬಳ್ಳಾರಿ ಜಿಲ್ಲೆಗೆ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಯ ಘೋ?ಣೆ ಆಗಿದ್ದು, ಇದರಿಂದ ಪ್ರಕರಣಗಳನ್ನ ತ್ವರಿತವಾಗಿ ವಿಲೇವಾರಿ ಮಾಡಲು ಸಹಾಯವಾಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವ
ಕೆಲಸ ಸರ್ಕಾರ ಮಾಡುತ್ತಿದ್ದು, ಹಂತ ಹಂತವಾಗಿ ಇದನ್ನು ಸರಿದೂಗಿಸಲಾಗುವುದು.
ಈ ನಿಟ್ಟಿನಲ್ಲಿ ಸದಾ ಜನರ ಸುರಕ್ಷತೆ ಬಗ್ಗೆ ಕಾಳಜಿ ಮಾಡುವ ಪೊಲೀಸರ ಹಾಗೂ ಅವರ ಕುಟುಂಬಗಳ ಕ್ಷೇಮಾಭಿವೃದ್ಧಿಗೆ ಸರ್ಕಾರ ಬದ್ಧವಿದೆ ಹಾಗೂ ೨ನೇ ಹಂತದ ಪೊಲೀಸ್ ವಸತಿ ಯೋಜನೆಯಲ್ಲಿ ರೂ.೨ ಸಾವಿರ ಕೋಟಿ ವೆಚ್ಚದಲ್ಲಿ ಒಟ್ಟು ೧೦,೦೩೪ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ ಈ ವ? ರೂ.೨೫೦ ಕೋಟಿ ನೀಡಲಾಗಿದೆ ಎಂದರು.

*ಅತ್ಯಾಧುನಿಕ ಪೊಲೀಸ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪನೆಗೆ ಚಿಂತನೆ:
ಜಿಲ್ಲೆಯಲ್ಲಿ ಅತ್ಯಾಧುನಿಕ ಪೊಲೀಸ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸುವ ಉದ್ದೇಶವಿದ್ದು, ಸ್ಮಾರ್ಟ್ ಪೊಲಿಸಿಂಗ್‌ನಿಂದ ಅಪರಾಧ ತಡೆ, ಜನರ ಸುರಕ್ಷತೆ, ರಸ್ತೆ ಸುರಕ್ಷತೆ ಸೇರಿದಂತೆ ತಮ್ಮ ಕೆಲಸವನ್ನು ಪೊಲೀಸ್ ಪಡೆಗಳು ಇನ್ನ? ಪರಿಣಾಮಕಾರಿಯಾಗಿ ಮಾಡಬಹುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಂ.ಎಸ್ ಸೋಮಲಿಂಗಪ್ಪ, ಎಸ್ಪಿ ಸೈದುಲು ಅಡಾವತ್, ಎಎಸ್ಪಿ, ಡಿವೈಎಸ್ಪಿಗಳು ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಇನ್ನೀತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top