ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿ ರಾಜ್ಯ ಸರ್ಕಾರ ಅಧಿಕಾರ ಕಸಿದುಕೊಂಡಿರುವ ಕುರಿತು ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ‌.ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. “ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿರುವಾಗ, ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂದು ಹೇಳಬಹುದೇ?” ಎಂದು ಚುನಾವಣಾ ಆಯೋಗದ ಅಧಿಕಾರವನ್ನು ಕಸಿದುಕೊಂಡ ರಾಜ್ಯ ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಚುನಾವಣಾ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕಾ ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರವು ಅಧಿಕಾರ ಕಸಿದುಕೊಂಡ ಬಗ್ಗೆ ನ್ಯಾಯಾಲಯಗಳು ಸಮಸ್ಯೆ ಬಗೆಹರಿಸಬಹುದೆಂಬ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top