ಟಿಡಿಆರ್‌ನ್ನು ಮೈಸೂರು ರಾಜವಂಶಸ್ಥರಿಗೆ ನೀಡಿ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ರಾಜ್ಯಸರ್ಕಾರಕ್ಕೆ ಕಾನೂನು ಸಮರದಲ್ಲಿ ತೀವ್ರ ಹಿನ್ನಡೆ

Kannada Nadu
ಟಿಡಿಆರ್‌ನ್ನು ಮೈಸೂರು ರಾಜವಂಶಸ್ಥರಿಗೆ ನೀಡಿ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜೈಮಹಲ್ ರಸ್ತೆಗಳ ವಿಸ್ತರಣೆ ಕುರಿತಂತೆ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3,400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕ(ಟಿಡಿಆರ್) ನ್ನು ತಕ್ಷಣ ಮೈಸೂರು ರಾಜವಂಶಸ್ಥರಿಗೆ ನೀಡುವಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ರಾಜ್ಯಸರ್ಕಾರಕ್ಕೆ ಕಾನೂನು ಸಮರದಲ್ಲಿ ತೀವ್ರ ಹಿನ್ನಡೆಯುಂಟಾಗಿದೆ.

ಸುಪ್ರೀAಕೋರ್ಟ್ನ ನ್ಯಾಯಮೂರ್ತಿಗಳಾದ ಎಂ.ಎA ಸುಂದರೇಶ್ ಮತ್ತು ಅರವಿಂದ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡಬೇಕೆಂದು ಈ ಮೊದಲು ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

3,400 ಕೋಟಿ ರೂ.ಗಳ ಟಿಡಿಆರ್‌ನ್ನು ಸುಪ್ರೀಂಕೋರ್ಟ್ನಲ್ಲಿ ರಾಜ್ಯಸರ್ಕಾರ ಠೇವಣಿ ಇಟ್ಟಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದೆಂದು ಅರ್ಜಿಯಲ್ಲಿ ರಾಜ್ಯಸರ್ಕಾರ ಮನವಿ ಮಾಡಿತ್ತು.

ಸುಪ್ರೀಂಕೋರ್ಟ್ ರಿಜಿಸ್ಟ್ರಾರ್‌ನಲ್ಲಿ ರಾಜ್ಯಸರ್ಕಾರ ಟಿಡಿಆರ್ ಇಟ್ಟಿತ್ತು.ಆದರೆ, ಇದಕ್ಕೆ ರಾಜಮನೆತನದ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ರಿಜಿಸ್ಟ್ರಾರ್‌ನಲ್ಲಿ ಟಿಡಿಆರ್ ಇರಬೇಕು ಎಂದು ಸರ್ಕಾರ ವಾದಿಸಿತ್ತು. ಈಗ ಅಂತಿಮವಾಗಿ ಸುಪ್ರೀಂಕೋರ್ಟ್ನ ನ್ಯಾಯಾಧೀಶರಾದ ಅರವಿಂದಕುಮಾರ್ ಒಳಗೊಂಡ ದ್ವಿಸದಸ್ಯ ಪೀಠ ಟಿಡಿಆರ್‌ನ್ನು ಅಂತಿಮವಾಗಿ ರಾಜಮನೆತನಕ್ಕೆ ನೀಡಲು ಸೂಚನೆ ನೀಡಿದೆ.

ಈ ಭೂಮಿಯ ಮೇಲೆ ರಾಜಮನೆತಕ್ಕೆ ಹಕ್ಕಿಲ್ಲ ಎಂಬ ರಾಜ್ಯಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನೂ ಬಾಕಿ ಉಳಿದಿದ್ದು, ಅಂತಿಮ ಆದೇಶಕ್ಕೆ ಒಳಪಟ್ಟು ಟಿಡಿಆರ್ ಸ್ವೀಕರಿಸಲು ಸೂಚನೆ ನೀಡಲಾಗಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದೆಂದು ರಾಜ್ಯಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಅರಮನೆ ಮೈದಾನ ಒಟ್ಟು 472 ಎಕತೆ 16 ಗುಂಟೆ ಜಾಗ ಹೊಂದಿದೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಕಾನೂನುಬದ್ಧ ಉತ್ತರಾಧಿಕಾರಿ ಮತ್ತು ಇತರರು ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಗಳು ಮತ್ತು ಇತರ ಪ್ರಕರಣಗಳ ಕುರಿತು ಸುಪ್ರೀಂಕೋರ್ಟ್ ಡಿಸೆಂಬರ್‌ನಲ್ಲಿ ಆದೇಶ ಹೊರಡಿಸಿತ್ತು.

ಈ ಆದೇಶದ ಪ್ರಕಾರ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್-45 ಬಿಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊAಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಟಿಡಿಆರ್ ನೀಡುವಂತೆ ನಿರ್ದೇಶನ ನೀಡಿತ್ತು.

ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಬಳಕೆಯಾಗುವ 15.36 ಎಕರೆ ಭೂಮಿಗೆ ಪರಿಹಾರವಾಗಿ 3,014 ಟಿಡಿಆರ್ ನೀಡಬೇಕು ಎಂದು ಸುಪ್ರೀಂಕೋರ್ಟ್ ಡಿಸೆಂಬರ್‌ನಲ್ಲಿ ಆದೇಶಿಸಿತ್ತು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";