ಬೆಳಗ್ಗೆ ಶಾಲೆಗೆ ಹೋಗಿದ್ದ ಶಿಕ್ಷಕ, ರಸ್ತೆಯಲ್ಲಿ ಶವವಾಗಿ ಪತ್ತೆ

ದಾವಣಗೆರೆ: ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗಿದ್ದ ಶಿಕ್ಷಕ. ರಾತ್ರಿ ಶವವಾಗಿ ರಸ್ತೆಯಲ್ಲಿ ಪತ್ತೆಯಾಗಿದ್ದಾನೆ. ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಬನ್ನಹಟ್ಟಿ ಗ್ರಾಮದ ಬಳಿ ನಡೆದಿದೆ.

27 ವರ್ಷದ ಮಾರುತಿ ನಾಯ್ಕ್, ಚಿಕ್ಕಬನ್ನಹಟ್ಟಿ ರಸ್ತೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಶಿಕ್ಷಕ ಮಾರುತಿ ನಾಯ್ಕ್ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿ ನಗರ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ.‌ನಿನ್ನೆ ಬೆಳಗ್ಗೆ ಎಂದಿನಂತೆ ಶಾಲೆಗೆ ಹೋಗಿದ್ದ, ರಾತ್ರಿಯಾದರೂ ಮನೆಗೆ ಬಾರದ ಬೆನ್ನಲ್ಲೇ ಕುಟುಂಬದವರು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಬೈಕ್ ಒಂದು ಕಡೆ ಇನ್ನೊಂದು ಕಡೆ ಶವವಾಗಿ ಪತ್ತೆಯಾಗಿದ್ದು, ಅಪರಿಚಿತ ವಾಹನ ಗುದ್ದಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಜಗಳೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬ ಸದಸ್ಯರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಜಗಳೂರು ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ‌.

.

Leave a Comment

Your email address will not be published. Required fields are marked *

Translate »
Scroll to Top