ಉಕ್ರೇನ್ ಬಿಕ್ಕಟ್ಟು: ವಾಪಸ್ಸಾಗುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸೂಕ್ತ ವ್ಯವಸ್ಥೆ’

ಬೆಂಗಳೂರು,ಫೆ,28 : ಉಕ್ರೇನಿನಿಂದ ರಾಜ್ಯಕ್ಕೆ ಹಿಂದಿರುಗುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ರಾಜ್ಯ ಮತ್ತು ಕೇಂದ್ರ ಸರಕಾರಗಳ ಮಟ್ಟದಲ್ಲಿ ಮಾತುಕತೆ ನಡೆಸಿ, ಸೂಕ್ತ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ. ಸೋಮವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಉಕ್ರೇನಿನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಮತ್ತು ಪದವಿ ಶಿಕ್ಷಣ ವ್ಯವಸ್ಥೆ ಮಾಡಲು ಯಾವ ತೊಂದರೆಯೂ ಇಲ್ಲ. ಆದರೆ, ಅಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದವರಿಗೆ ಇಲ್ಲಿ ವ್ಯವಸ್ಥೆ ಕಲ್ಪಿಸಲು ಕೆಲವು ಮಿತಿಗಳಿವೆ,’ ಎಂದರು.

ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಂಭೀರವಾಗಿ ಚಿಂತಿಸುತ್ತಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಮಾತುಕತೆ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಮಕ್ಕಳ ಬಗ್ಗೆ ಕಳಕಳಿ ಹೊಂದಿದ್ದಾರೆ ಎಂದು ಅವರು ನುಡಿದರು.

Leave a Comment

Your email address will not be published. Required fields are marked *

Translate »
Scroll to Top