ವಜಾ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ !

Kannada Nadu
ವಜಾ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ !

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ವಜಾಗೊಂಡಿರುವ ಕೆಎನ್ ರಾಜಣ್ಣ ಚಿvಡಿu, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದು ಹೇಳಿದ್ದಾರೆ.
ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟಿದ್ದ ಕೆಎನ್ ರಾಜಣ್ಣ ತಲೆ ದಂಡ ಆಗಿದ್ದು, ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ವ್ಯಾಪಕ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಇನ್ನು ತಮ್ಮ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ‘ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.

KN Rajanna: ವಯಸ್ಸಾಯ್ತು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕೆಎನ್‌ ರಾಜಣ್ಣ -  Kannada News | minister KN Rajanna says I will not contest in nxt elections  - Vishwavani TV Vishwavani TV

ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

‘ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.

ಹೈಕಮಾಂಡ್ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ
ಇದೇ ವೇಳೆ ‘ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";