ಸಕಲೇಶಪುರ ಕ್ಷೇತ್ರಕ್ಕೆ ಅನುದಾನದ ಕೊರತೆಯಾಗಿಲ್ಲ

ಬೆಂಗಳೂರು,15: ಜಲ ಸಂಪನ್ಮೂಲ ಇಲಾಖೆಯಿಂದ ಎಸ್.ಸಿ.ಪಿ./ಟಿ.ಎಸ್.ಪಿ ಯೋಜನೆಯಡಿಯಲ್ಲಿ ಸಕಲೇಶಪುರ ಕ್ಷೇತ್ರಕ್ಕೆ ೧೩.೦೦ ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಅಲ್ಲಿಯ ಕಾಮಗಾರಿಗಳಿಗೆ ಯಾವುದೇ ಯೋಜನೆಯಡಿ ತಾರತಮ್ಯವೆಸಗಿಲ್ಲವೆಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ೨೦೧೫-೧೬ ರಿಂದ ಸಕಲೇಶಪುರ ಕ್ಷೇತ್ರದ ರಸ್ತೆಗಳಿಗೆ ೨೨೩ ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ ಎಂದು ಸಚಿವರು ಪ್ರಶ್ನೋತ್ತರ ವೇಳೆಯಲ್ಲಿ ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ನೀರಾವರಿ ಇಲಾಖೆಯ ರಸ್ತೆ ಕಾಮಗಾರಿಗಳನ್ನು ಅವಶ್ಯಕತೆ ಆಧಾರದ ಮೇಲೆ ಕೈಗೊಳ್ಳಲಾಗುತ್ತದೆ ಹೊರತು ಬೇರೆ ಯಾವುದೇ ಮಾನದಂಡವನ್ನು ಅನುಸರಿಸುವುದಿಲ್ಲ ಎಂದು ಹೇಳಿದರು.

Leave a Comment

Your email address will not be published. Required fields are marked *

Translate »
Scroll to Top