ಕಾಫಿ, ಟೀಗೆ ಲಕ್ಷಾಂತರ ವೆಚ್ಚ ಮಾಡುವವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಭರಿಸಲಾಗದೇ?: ಸರ್ಕಾರದವಿರುದ್ಧ ಹೈಕರ‍್ಟ್‌ ಆಕ್ರೋಶ

ಬೆಂಗಳೂರು: ನಿಮ್ಮ ಕಚೇರಿಯಲ್ಲಿ ಕಾಫಿ, ಟೀಗೆ ಪ್ರತಿ ತಿಂಗಳಿಗೆ ಲಕ್ಷಾಂತರ ರೂಪಾಯಿ ರ‍್ಚಾಗುತ್ತದೆ. ಆದರೆ, ಬಡ ಕರ‍್ಮಿಕರ ಪುತ್ರಿಯರ ಶಿಕ್ಷಣದ ರ‍್ಚು ಭರಿಸಲು ನಿಮಗೆ ಆಗದೇ? ಇಂಥ ಮಕ್ಕಳ ಸಹಾಯಕ್ಕೆ ರಾಜ್ಯ ರ‍್ಕಾರ ಮುಂದಾಗಬೇಕು. ಸೆಸ್‌ ಸಂಗ್ರಹಿಸಿರುವುದು ಅವರಿಗಾಗಿ ಅಲ್ಲವೇ? ಎಂದು ರ‍್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನರ‍್ಮಾಣ ಕರ‍್ಮಿಕರ ಕಲ್ಯಾಣ ಮಂಡಳಿಯನ್ನು ಹೈಕರ‍್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿತು.

ಇದೇ ವೇಳೆ, ರ‍್ಜಿದಾರ ವಿದ್ಯರ‍್ಥಿನಿಯರ ಶುಲ್ಕದ ಜೊತೆಗೆ ತಲಾ ರೂ.೨೫ ಸಾವಿರ ವ್ಯಾಜ್ಯದ ವೆಚ್ಚ ನೀಡುವಂತೆ ಆದೇಶಿಸಿದೆ.

ಕಟ್ಟಡ ಕರ‍್ಮಿಕರ ಮಕ್ಕಳಿಗೆ ಮೀಸಲಾದ ರ‍್ಗದಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ರ‍್ಜಿ ಸಲ್ಲಿಸಿದ್ದ ಇಬ್ಬರು ಸ್ನಾತಕೋತ್ತರ ವಿದ್ಯರ‍್ಥಿನಿಯರ ನೆರವಿಗೆ ಬಾರದ ರ‍್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನರ‍್ಮಾಣ ಕರ‍್ಮಿಕರ ಕಲ್ಯಾಣ ಮಂಡಳಿಯ ಉದಾಸೀನ ನಿಲುವಿಗೆ ಈಚೆಗೆ ರ‍್ನಾಟಕ ಹೈಕರ‍್ಟ್‌ ಚಾಟಿ ಬೀಸಿದೆ.

ರ‍್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನರ‍್ಮಾಣ ಕರ‍್ಮಿಕರ ಫೆಡರೇಶನ್ ಪ್ರಧಾನ ಕರ‍್ಯರ‍್ಶಿ ಕೆ ಮಹಾಂತೇಶ್‌ ಹಾಗೂ ಇತರರು ಸಲ್ಲಿಸಿದ್ದ ರ‍್ಜಿಯ ವಿಚಾರಣೆಯನ್ನು ನ್ಯಾಯಮರ‍್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ರ‍್ಜಿದಾರ ವಿದ್ಯರ‍್ಥಿನಿಯರು ಭರಿಸಬೇಕಿದ್ದ ಕಾಲೇಜು ಶುಲ್ಕವು ಯಾವುದೇ ಒಂದು ರ‍್ಕಾರಿ ಕಚೇರಿಯಲ್ಲಿನ ನೌಕರ ಪಡೆಯಬಹುದಾದ ಸಾರಿಗೆ ಮತ್ತು ತುಟ್ಟಿ ಭತ್ಯೆಗೆ ಸಮಾನವಾದುದು. ಆದರೆ, ಅಂದಂದಿನ ತುತ್ತು ಅನ್ನವನ್ನು ಅಂದೇ ದುಡಿದು ತಿನ್ನುವ ಬಡರ‍್ಗದ ವಿದ್ಯರ‍್ಥಿನಿಯರ ಶೈಕ್ಷಣಿಕ ಧನಸಹಾಯ ಕೋರಿದ ರ‍್ಜಿಗಳನ್ನು ಕಳೆದ ೧೦ ತಿಂಗಳಿನಿಂದ ಶೈತ್ಯಾಗಾರದಲ್ಲಿ ಇರಿಸಿದ ನಿಮ್ಮ ನಿಲುವು ಬೆಚ್ಚಿಬೀಳಿಸುವಂತಿದೆ ಎಂದು ಪೀಠ ಕಲ್ಯಾಣ ಮಂಡಳಿ ಅಧಿಕಾರಿಗಳಿಗೆ ಬೆವರಿಳಿಸಿದೆ.

ಕಲ್ಯಾಣ ಮಂಡಳಿ‌ ಪರವಾಗಿ ಹಾಜರಿದ್ದ ವಕೀಲ ಬಿ ಎನ್‌ ಪ್ರಶಾಂತ್‌, ಮಂಡಳಿಯ ಈ ಹಿಂದಿನ ತರ‍್ಮಾನದಂತೆ ಕೇವಲ ರೂ. ೧೦ ಸಾವಿರ ಹಾಗೂ ರೂ.೧೧ ಸಾವಿರವನ್ನು ಮಾತ್ರವೇ ಪಾವತಿಸಲು‌ ಸಾಧ್ಯ ಎನ್ನುವ ಅಭಿಪ್ರಾಯವನ್ನು ತಳ್ಳಿ ಹಾಕಿರುವ ಪೀಠವು ರ‍್ಕಾರದ ಅಧಿಸೂಚನೆ ಅನುಸಾರ ರ‍್ಜಿದಾರ ವಿದ್ಯರ‍್ಥಿನಿಯರು ಹೆಚ್ಚಿನ ಧನಸಹಾಯ ಪಡೆಯಲು ರ‍್ಹರಾಗಿದ್ದಾರೆ ಎಂದು ಹೇಳಿದೆ.

ಕರ‍್ಮಿಕರ ಶ್ರಮದಿಂದ ಸಂಗ್ರಹವಾಗಿರುವ ರೂ.೮,೨೦೦ ಕೋಟಿ ಕಲ್ಯಾಣ ನಿಧಿ ಇದ್ದರೂ ಅವರ ಮಕ್ಕಳಿಗೆ ನ್ಯಾಯಬದ್ದವಾಗಿ ನೀಡಬೇಕಾದ ಶೈಕ್ಷಣಿಕ ಧನಸಹಾಯವನ್ನು ನಿರಾಕರಿಸಿರುವುದನ್ನು ಯಾವ‌ ಕಾರಣದಿಂದಲೂ ಸರ‍್ಥನೆ ಮಾಡಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

ರ‍್ಜಿದಾರ ವಿದ್ಯರ‍್ಥಿನಿಯರಲ್ಲಿ ಅಂಕಿತಾ ಎಲ್‌ಎಲ್‌ಬಿ ಹಾಗೂ ಅಮೃತಾ ಎಂಬಿಎ ಪದವೀಧರರಿದ್ದಾರೆ. ಇವರಿಬ್ಬರೂ ವಿದ್ಯರ‍್ಥಿನಿಯರು ಈಗಾಗಲೇ ಹೇಗೋ ಹೆಣಗಾಡಿ ರೂ.೩೦ ಮತ್ತು ರೂ. ೩೫ ಸಾವಿರ ಮೊತ್ತ ಶುಲ್ಕವನ್ನು ಸ್ವಂತ ರ‍್ಚಿನಲ್ಲಿ ತುಂಬಿದ್ದಾರೆ. ಅವರು ಕೋರಿರುವ ಮೊತ್ತದ ಶುಲ್ಕವನ್ನು ಈ ಮಧ್ಯಂತರ ಆದೇಶ ನೀಡಿದ ದಿನದಿಂದ ನಾಲ್ಕು ವಾರದೊಳಗೆ ಅವರ ಖಾತೆಗೆ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

 

ಒಂದು ವೇಳೆ ವ್ಯಾಜ್ಯದ ವೆಚ್ಚ ಸಹಿತ ಈ ಹಣವನ್ನು ವಿದ್ಯರ‍್ಥಿಗಳ ಖಾತೆಗೆ ನಿಗದಿತ ಅವಧಿಯೊಳಗೆ ಪಾವತಿಸಲು ವಿಫಲವಾದರೆ ನಂತರದ ಪ್ರತಿ ದಿವಸಕ್ಕೆ ರೂ. ೫೦೦ ಗಳನ್ನು ಪ್ರತಿ ವಿದ್ಯರ‍್ಥಿನಿಗೆ ದಂಡದ ರೂಪದಲ್ಲಿ ಪಾವತಿಸಬೇಕು ಎಂದು ಕಲ್ಯಾಣ ಮಂಡಳಿಗೆ ಖಡಕ್‌ ತಾಕೀತು ಮಾಡಿದೆ. ರ‍್ಜಿದಾರರ ಪರ ವಕೀಲ ಆದಿತ್ಯ ಚರ‍್ಜಿ ವಾದ ಮಂಡಿಸಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top