ಸಂಸದ ಪ್ರಜ್ವಲ್ ರೇವಣ್ಣ ರನ್ನು ದೇಶಕ್ಕೆ ವಾಪಸು ಕರೆತರಲು, ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸಬೇಕೆಂದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶಕ್ಕೆ ವಾಪಸು ಕರೆತರಲು, ಅವರಿಗೆ ನೀಡಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ದೊರೆಯದ ಕಾರಣ ಇದೀಗ ಮತ್ತೊಮ್ಮೆ ಪತ್ರದ ಮೂಲಕ ಒತ್ತಡ ಹೇರಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಎಸಗರುವ ಕೃತ್ಯ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದ ಗಮನ ಸೆಳದಿದ್ದು, ಆರೋಪಿಯು ಲೋಕಸಭಾ ಸದಸ್ಯನಾಗಿರುವುದಲ್ಲದೆ, ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲೂ ಸ್ಪರ್ಧಿಸಿದ್ದಾನೆ. ಸಾಕಷ್ಟು ಗಂಭೀರ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದು, ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಬೇಕು. ಭಾರತಕ್ಕೆ  ವಾಪಸ್ ಕರೆತರಲು ತ್ವರಿತ ಕ್ರಮವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಘಟನೆಗಳು ಕರ್ನಾಟಕ ರಾಜ್ಯದ ಜನರ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿದೆ. ಅಲ್ಲದೇ ರಾಷ್ಟ್ರವ್ಯಾಪಿ ಆತಂಕಕ್ಕೂ ಕಾರಣವಾಗಿವೆ. ಪ್ರಜ್ವಲ್ ಜರ್ಮನಿಗೆ ತನ್ನ ರಾಜತಾಂತ್ರಿಕ ಪಾಸ್‌ಪೋರ್ಟ್ ಡಿ-1135500 ಅನ್ನು ಬಳಸಿಕೊಂಡು ದೇಶ ಬಿಟ್ಟು ಹೋಗಿದ್ದಾರೆ. ಅವರ ವಿರುದ್ಧ ಆರೋಪಗಳು ಬಂದಾಗ, ಹೇಯ ಕೃತ್ಯಗಳು ಹೊರಬಂದ ಬಳಿಕ ಮೊದಲ ಎಫ್‌ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಪಲಾಯನ ಮಾಡಿದ್ದಾರೆ. ವಿದೇಶದಿಂದ ಪಲಾಯನ ಮಾಡಲು ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ರಾಜತಾಂತ್ರಿಕ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾನೂನು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ದೇಶಕ್ಕೆ ಸುರಕ್ಷಿತವಾಗಿ ಮರಳಬೇಕು ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ದಳ ರಚಿಸಿದೆ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪ ಸಂಬಂಧ ವಿಚಾರಣೆಗೆ ಆರೋಪಿಯ ಅಗತ್ಯವಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಲುಕೌಟ್ ನೋಟಿಸ್, ಬ್ಲೂಕಾರ್ನರ್ ನೋಟಿಸ್ ಅಲ್ಲದೆ, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಯ ಎರಡು ನೋಟಿಸ್‌ಗಳಿಗೂ ಇದುವರೆಗೆ ಸ್ಪಂದಿಸಿಲ್ಲ.

ಏಪ್ರಿಲ್ ೨೭ರಿಂದ ತಲೆಮರೆಸಿಕೊಂಡು ರಾಜತಾಂತ್ರಿಕ ಪಾಸ್‌ಪೋರ್ಟ್ ಮೇಲೆ ವಿದೇಶದಲ್ಲಿರುವ ಪ್ರಜ್ವಲ್‌ನನ್ನು ಭಾರತಕ್ಕೆ ಕರೆತರುವ ಸಂಬಂಧ, ತಾವು ಈ ಹಿಂದೆ ಬರೆದ ಪತ್ರದಿಂದ ಇದುವರೆಗೂ ಯಾವುದೇ ಪ್ರಕ್ರಿಯೆ ಜರುಗಿಲ್ಲ ಎಂದಿದ್ದಾರೆ.

 

ಈಗಲಾದರೂ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪ್ರಜ್ವಲ್ ರೇವಣ್ಣನನ್ನು ವಿಚಾರಣೆಗೆ ದೇಶಕ್ಕೆ ಕರೆತರುವಲ್ಲಿ ಕೇಂದ್ರ ಸರ್ಕಾರ ಆತನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಬೇಕೆಂದು ಕೋರುವುದಾಗಿ ಮುಖ್ಯಮಂತ್ರಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top