ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

ಮೇಷ ರಾಶಿ: ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಸ್ವಲ್ಪ ಗೊಂದಲಗಳು ಉಂಟಾಗುತ್ತವೆ. ಕುಟುಂಬದ ಸದಸ್ಯರ ವರ್ತನೆಯಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರ್ಥಿಕ ಸ್ಥಿರತೆ ಇರುವುದಿಲ್ಲ. ವೃತ್ತಿ ಮತ್ತು ಉದ್ಯೋಗದ ವಿಚಾರದಲ್ಲಿ ಗೊಂದಲಮಯ ಪರಿಸ್ಥಿತಿಗಳು ಉಂಟಾಗುತ್ತವೆ. ವ್ಯಾಪಾರಗಳು ನಿಧಾನವಾಗುತ್ತವೆ.

ವೃಷಭ ರಾಶಿ: ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳನ್ನು ಪರಿಹರಿಸಿಕೊಳ್ಳುತ್ತೀರಿ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ.ವೃತ್ತಿಪರ ಉದ್ಯೋಗಗಳಲ್ಲಿ ಯೋಜಿತ ಕೆಲಸಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ.ದೂರದ ಬಂಧುಗಳಿಂದ ಶುಭವಾರ್ತೆಗಳು ದೊರೆಯುತ್ತವೆ.ವ್ಯಾಪಾರಗಳಲ್ಲಿ  ಪಾಲುದಾರರೊಂದಿಗಿನ ಸಮಸ್ಯೆಗಳನ್ನು ರಾಜಿಮಾಡಿಕೊಳ್ಳುತ್ತೀರಿ.

ಮಿಥುನ ರಾಶಿ: ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ.ಕೈಗೊಂಡ ಕೆಲಸಗಳಲ್ಲಿ ಎಷ್ಟೇ ಕಷ್ಟಪಟ್ಟರೂ ಫಲಿತಾಂಶ ಸೀಮಿತವಾಗಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಸಂಗಾತಿಯ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ವೃತ್ತಿ ಪರ ವ್ಯಾಪಾರಗಳಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ.  ಉದ್ಯೋಗದ ವಿಚಾರದಲ್ಲಿ ಆತುರ ಒಳ್ಳೆಯದಲ್ಲ.

ಕಟಕ ರಾಶಿ: ಪ್ರಮುಖ  ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು, ಲಾಭವನ್ನು ಪಡೆಯುತ್ತೀರಿ. ದೂರ ಪ್ರಯಾಣಗಳು  ಕೂಡಿ ಬರುತ್ತವೆ. ನಿರುದ್ಯೋಗಿಗಳಿಗೆ ಬಹುನಿರೀಕ್ಷಿತ ಅವಕಾಶಗಳು  ದೊರೆಯುತ್ತವೆ.ಕೈಗೊಂಡ ಕೆಲಸಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯವೈಖರಿಯಿಂದ ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ.

ಸಿಂಹ ರಾಶಿ: ಪ್ರಮುಖ ಕೆಲಸಗಳು ಖರ್ಚು ಮತ್ತು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ.ಆರ್ಥಿಕ ಒತ್ತಡ ಹೆಚ್ಚಾಗುತ್ತದೆ.ವೃತ್ತಿಪರ ಉದ್ಯೋಗಗಳಲ್ಲಿ ಗೊಂದಲಮಯ ಪರಿಸ್ಥಿಗಳಿರುತ್ತವೆ.ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

 

ಕನ್ಯಾ ರಾಶಿ: ಹಣಕಾಸಿನ ವ್ಯವಹಾರಗಳು ಅನುಕೂಲಕರವಾಗಿರುತ್ತವೆ . ವೃತ್ತಿಪರ ಉದ್ಯೋಗಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆಯುತ್ತೀರಿ. ಕೈಗೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ  ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಸ್ಥಿರಾಸ್ತಿ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು ಆಗುತ್ತವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ದೂರ ಪ್ರಯಾಣಗಳು ಲಾಭದಾಯಕವಾಗಿರುತ್ತವೆ.

ತುಲಾ ರಾಶಿ: ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ .ಪ್ರಯಾಣದಲ್ಲಿ ಆತುರ ಒಳ್ಳೆಯದಲ್ಲ.ನಿರುದ್ಯೋಗಿಗಳು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವ್ಯಾಪಾರದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಆರ್ಥಿಕ ಅನುಕೂಲತೆ ಉಂಟಾಗುತ್ತದೆ.

ವೃಶ್ಚಿಕ ರಾಶಿ: ಕುಟುಂಬದ ಮುಖ್ಯಸ್ಥರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ದೈವಿಕ ಸೇವಾ ಕಾರ್ಯಕ್ರಮಗಳನ್ನು ನೆರವೇರಿಸುತ್ತೀರಿ.ವೃತ್ತಿ, ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ, ಆರ್ಥಿಕವಾಗಿ ಏರುಳಿತಗಳು ಇರುತ್ತವೆ.ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುವುದಿಲ್ಲ.

ಧನುಸ್ಸು ರಾಶಿ: ವಾಹನ ಪ್ರಯಾಣದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು. ಅನಿವಾರ್ಯವಾಗಿ ಇತರರೊಂದಿಗೆ ಘರ್ಷಣೆಗಳು ಉಂಟಾಗುತ್ತವೆ. ಸಾಲದ ಸಮಸ್ಯೆಗಳು ನೋವುಂಟುಮಾಡುತ್ತವೆ. ಉದ್ಯೋಗಿಗಳಿಗೆ ಹಠಾತ್  ಸ್ಥಾನ ಚಲನೆ ಸೂಚನೆಗಳಿವೆ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು ಕೈಗೊಂಡ ಕೆಲಸದಲ್ಲಿ ಅಡೆತಡೆಗಳು ಎದುರಾಗುತ್ತವೆ.

ಮಕರ ರಾಶಿ: ಕುಟುಂಬ ಸದಸ್ಯರ ನೆರವಿನಿಂದ ಕೆಲವು ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ.ದೀರ್ಘಕಾಲದ ಸಾಲಗಳನ್ನು ನಿಭಾಯಿಸಲು ಆತ್ಮೀಯ ಸ್ನೇಹಿತರ ಸಹಾಯ ದೊರೆಯುತ್ತದೆ.ವೃತ್ತಿ ಪರ ವ್ಯಾಪಾರಗಳು ಅಲ್ಪ ಲಾಭ ಪಡೆಯುತ್ತವೆ.  ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದ ಮುಕ್ತಿ  ದೊರೆಯುತ್ತದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

ಕುಂಭ ರಾಶಿ: ಮಕ್ಕಳ ಉದ್ಯೋಗ,ವಿವಾಹ ಪ್ರಯತ್ನಗಳು ಫಲ ನೀಡುತ್ತವೆ. ಪ್ರಮುಖ ವ್ಯವಹಾರಗಳು ಅನುಕೂಲಕರವಾಗಿ ಸಾಗುತ್ತವೆ, ಕುಟುಂಬ ಸದಸ್ಯರೊಂದಿಗಿನ ಘರ್ಷಣೆಗಳು ಇತ್ಯರ್ಥವಾಗುತ್ತವೆ, ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗುತ್ತಾರೆ. ಮದುವೆಯ ಶುಭ ಕಾರ್ಯಗಳಿಗೆ ಆಹ್ವಾನಗಳು ಬರುತ್ತವೆ.

 

ಮೀನ ರಾಶಿ: ಇತರರೊಂದಿಗೆ ಜಾಗರೂಕತೆಯಿಂದ ವ್ಯವಹರಿಸಬೇಕು.ವೃತ್ತಿಪರ  ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ  ಸಮಸ್ಯೆಗಳು ಉಂಟಾಗುತ್ತವೆ.ವ್ಯಾಪಾರದಲ್ಲಿ ಒತ್ತಡ ಹೆಚ್ಚಾಗುತ್ತದೆ .ಕುಟುಂಬದ ಹಿರಿಯರ ಸಲಹೆಯಿಂದ ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತೀರಿ . ಪ್ರಮುಖ ವ್ಯವಹಾರಗಳು ಅನುಕೂಲಕರವಾಗಿ ಸಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top