ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಪಾರ್ಶ್ವವಾಯುವಿಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಈ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೂರನೇ ಬಾರಿ ತೀವ್ರ ಆರೋಗ್ಯ ಸಮಸ್ಯೆಯಿಂದ ಪಾರಾಗಿದ್ದಾರೆ.  

          ತೀವ್ರ ಜ್ವರ ಹಾಗೂ ಮೈಲ್ಡ್ ಸ್ಟ್ರೋಕ್ ಗೆ ಒಳಗಾಗಿದ್ದ ಕಾರಣದಿಂದ ಆಗಸ್ಟ್ 30 ನಸುಕಿನ ಜಾವ ಬೆಂಗಳೂರಿನ ಜನಯನಗರದಲ್ಲಿ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಎರಡು ದಿನಗಳ ಕಾಲ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ಶುಕ್ರವಾರ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು.

 

          ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಗವಂತನ ದಯೆ ಹಾಗೂ ತಂದೆತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ 5 ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು. ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ‌ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ ಎಂದರು. 

ರಾಜಕೀಯ ಹೊರತುಪಡಿಸಿ ಎರಡು ಮೂರು ವಿಚಾರ ಮಾತನಾಡುತ್ತೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಕುಮಾರಸ್ವಾಮಿಆಸ್ಪತ್ರೆಗೆ ದಾಖಲಾಗುವ ಮೊದಲು ಫ್ಯಾಮಿಲಿ ವೈದ್ಯ ಮಂಜುನಾಥಗೆ ಫೋನ್ ಮಾಡಿದ್ದೆ. ನಂತರ ಅಫೋಲೋ ಆಸ್ಪತ್ರೆ ತಜ್ಞ ವೈದ್ಯ ಯತೀಂದ್ರಸತೀಶ್ ಸಲಹೆಯಂತೆ ಬುಧವಾರ ಬೆಳಗ್ಗೆ 3:30ರ ಸುಮಾರಿಗೆ ಆಸ್ಪತ್ರೆಗೆ ದಾಖಲಾದೆ. ನನ್ನ ಅದೃಷ್ಟ ನುರಿತ ತಜ್ಞ ವೈದ್ಯರು ಬೆಂಗಳೂರಿನಲ್ಲೇ ಇದ್ದರು. ತಿಂಗಳಿನಲ್ಲಿ 15 ದಿನ ಅವರು ಹೊರ ದೇಶದಲ್ಲೇ ಇರುತ್ತಿದ್ದರು. ನಿರ್ಲಕ್ಷ್ಯ ಮಾಡದೆ ಕ್ಷಣಕ್ಷಣಕ್ಕೂ ನನ್ನ ಆರೋಗ್ಯ ಸ್ಥಿತಿ ಚೆನ್ನಾಗಿ ನೋಡಿಕೊಂಡರು. ಕೇವಲ ಗಂಟೆಯಲ್ಲೇ ನನ್ನನ್ನು ಮೊದಲ ಸ್ಥಿತಿಗೆ ತಂದರು ಎಂದು ವೈದ್ಯರ ಚಿಕಿತ್ಸೆ ಬಗ್ಗೆ ವಿವರಿಸಿದರು.

          ತಮ್ಮ ಆರೋಗ್ಯ ಕೈತಪ್ಪಿ ಆಸ್ಪತ್ರೆಗೆ ದಾಖಲಾದ ಸಂದರ್ಭವನ್ನು ವಿವರಿಸಿದ ಮಾಜಿ ಮುಖ್ಯಮಂತ್ರಿ ಅವರುಆ ದಿನ ನಾನು ಬಿಡದಿಯ ನನ್ನ ತೋಟದ ಮನೆಯಲ್ಲಿದ್ದೆ. ನನ್ನ ಆಪ್ತ ಸಹಾಯಕ ಸತೀಶ್ ಜತೆಯಲ್ಲಿ ಇದ್ದರು. ತಡರಾತ್ರಿ ನನ್ನ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿತುಕೂಡಲೇ ಮಂಜುನಾಥ್ ಅವರಿಗೆ ಕರೆ ಮಾಡಿದೆನಂತರ ಸತೀಶ್ ಜಯಚಂದ್ರ ಅವರಿಗೆ ಕರೆಮಾಡಿದೆ. ಕೇವಲ 20 ನಿಮಿಷದಲ್ಲಿ ಆಸ್ಪತ್ರೆಗೆ ದಾಖಲಾದೆ. ನನ್ನ ಆರೋಗ್ಯ ಕ್ಷೇಮದ ಬಗ್ಗೆ ವಿಚಾರಿಸಿದವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

 

          ಗೋಲ್ಡನ್ ಟೈಂ ಬಹಳ ಮುಖ್ಯ: ಪಾರ್ಶ್ವವಾಯು ಆದಾಗ ಯಾವಾಗ ರೀತಿ ಸ್ಪಂದಿಸಬೇಕು ಎಂದು ಈಗಷ್ಟೇ ವೈದ್ಯರು ಹೇಳಿದ್ದಾರೆ. ಇದನ್ನ ನಿರ್ಲಕ್ಷ್ಯ ಮಾಡಬೇಡಿ. ಇದು ಗೋಲ್ಡನ್ ಟೈಂ. ಜೀವನ ಪರ್ಯಂತ ಕಾಡುವಂತೆ ಮಾಡಿಕೊಳ್ಳುವುದು ಬೇಡ. ಇದು ಮೂರನೇ ಜನ್ಮವನ್ನು ನನಗೆ ಭಗವಂತ ಕೊಟ್ಟಿದ್ದಾನೆ. 64 ವರ್ಷದಲ್ಲಿ ಮೂರು ಬಾರಿ ಮರುಜನ್ಮ ಪಡೆದಿದ್ದೇನೆ. ವೈದ್ಯಕೀಯ ಹಾಗೂ ಭಗವಂತನ ದಯೆಯಿಂದ ಇಳಿದಿದ್ದೇನೆ. ನಾನು ನಿರ್ಲಕ್ಷ್ಯ ಮಾಡಿದ್ದರೆ ನಿಮ್ಮೊಂದಿಗೆ ಈಗ ಸಹಜವಾಗಿ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಈ ಹಿಂದೆಯೂ  ಎಡಭಾಗ ಸ್ವಾಧೀನ ಕಳೆದುಕೊಂಡಿದ್ದೆಮೂರು ಬಾರಿ ಪುನರ್ಜನ್ಮ ಸಿಕ್ಕಿದೆ: ಎರಡನೇ ಬಾರಿ ನನಗೆ ಪಾರ್ಶ್ವವಾಯು ಆಗಿದೆ. ಎರಡನೇ ಬಾರಿ ಸಿಎಂ ಆದಾಗ ವಾಲ್ಮೀಕಿ‌ ಜಯಂತಿಯಂದು ಟಿವಿ ವಾಹಿನಿಯೊಂದರಲ್ಲಿ ಕತ್ತಲತ್ತ ತೆರಳಿದ ಕರ್ನಾಟಕ ಎಂದು ಒಂದು ಕಾರ್ಯಕ್ರಮದ ಪ್ರೋಮೊ ಬಂದಿತ್ತು. ಅದನ್ನು ನೋಡಿ ಆಗ ಆಘಾತಕ್ಕೆ ಒಳಗಾಗಿ ಎಡಭಾಗ ಸ್ವಾಧೀನ ಕಳೆದುಕೊಂಡಿದ್ದೆ. ಅವತ್ತು ವೈದ್ಯರ ಚಿಕಿತ್ಸೆಯಿಂದ  ಪಾರಾದೆ. ಆದರೆ ಈ ಬಾರಿ ಹೆಚ್ಚಾಗಿ ದೇಹಕ್ಕೆ ಹಾನಿಯಾಗಿದೆ.  ಭಗವಂತನ ದಯೆಯಿಂದ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಪಾರ್ಶ್ವವಾಯುವನ್ನು ಒಂದು ಕ್ಷಣವನ್ನೂ ವ್ಯರ್ಥ ಮಾಡಬೇಡಿ. ಕುಟುಂಬದಲ್ಲಿ ಯಾರಿಗಾದರು ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಕೊಡಿಸಿ. ಹಣದ ಬಗ್ಗೆ ಯೋಚಿಸಬೇಡಿಜೀವ ಉಳಿಸಿ ಎಂದು ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡರು

ಇವತ್ತು ಚಂದ್ರಯಾನಸೂರ್ಯಯಾನ ಮಾಡಿದ್ದೇವೆ. ವಿಜ್ಞಾನತಂತ್ರಜ್ಞಾನಆರೋಗ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಕರ್ನಾಟಕದಲ್ಲಿ ಅತ್ಯಂತ ನುರಿತಪ್ರತಿಭಾವಂತಶ್ರೇಷ್ಠ ವೈದ್ಯರು ಇದ್ದಾರೆ. ಎಲ್ಲರೂ ಜಾಗೃತರಾಗಿ ಇರಬೇಕು ಎಂಬುದು ನನ್ನ ಮನವಿ ಎಂದು ಕುಮಾರಸ್ವಾಮಿ ಅವರು ಕಳಕಳಿಯಾಗಿ ಕೋರಿದರು.

          ತಂದೆಗೆ ನಿಖಿಲ್ ಅವರ ಮನವಿ:

 

          ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರುವೈದ್ಯರಿಗೆ ಧನ್ಯವಾದ ತಿಳಿಸಿದರು. ತಂದೆ ತಾಯಿ ಅವರು ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲಮಗನಾಗಿ ನಮ್ಮ ತಂದೆ ಅವರ ಬಳಿ ಕೇಳುವುದಿಷ್ಟೇ; “ನೀವು ಜನಗಳ ಆಸ್ತಿನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿನಿದ್ದೆ ಮಾಡಿ” ಎಂದು ಮಾಧ್ಯಮಗಳ ಮುಂದೆಯೇ ಮನವಿ ಮಾಡಿಕೊಂಡರು.

ಎಚ್ಚರಿಕೆ ಮಾತುಗಳನ್ನು ಹೇಳಿದ ವೈದ್ಯರು:

          ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ವೈದ್ಯರಾದ ಡಾ.ಸತೀಶ್ ಚಂದ್ರ ಅವರು ಮಾತನಾಡಿಪಾರ್ಶ್ವವಾಯು ಎನ್ನುವುದು ಬಹಳ ಸಾಮಾನ್ಯ ಕಾಯಿಲೆಯಾದರೂ ಅದರ ಬಗ್ಗೆ ತಿಳಿವಳಿಕೆ ಅವಶ್ಯಕತೆ ಇದೆ. ಅದರ ಚಿಹ್ನೆಗಳನ್ನು ತಿಳಿದುಕೊಂಡ ತಕ್ಷಣ ಆಸ್ಪತ್ರೆಗೆ ಬರಬೇಕು.ಕಣ್ಣುಕೈಮಾತುಗಳಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಬರಬೇಕು. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ತಲುಪಬೇಕು. ಆಗ ಚಿಕಿತ್ಸೆ ಕೊಡಲು ಅನುಕೂಲ ಆಗುತ್ತದೆ. ರಕ್ತದ ಒತ್ತಡಹೃದಯದ ಕಾಯಿಲೆಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಸ್ಟ್ರೋಕ್ ಅನ್ನು ತಡೆಯಬಹುದು ಎಂದರು.

          ಆಸ್ಪತ್ರೆಯ ಉಪಾಧ್ಯಕ್ಷ ಡಾ.ಗೋವಿಂದಯ್ಯ ಯತೀಶ್ ಅವರು ಮಾತನಾಡಿಮಾಜಿ ಮುಖ್ಯಮಂತ್ರಿ ಅವರ ಆರೋಗ್ಯಕ್ಕಾಗಿ ಜನತೆಗೆ ಬಹಳಷ್ಟು ಕಾಳಜಿಕಳಕಳಿ ಇತ್ತು. ಜನರ ಆತಂಕವನ್ನುಕಳಕಳಿಯನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಈ ಕಾರಣಕ್ಕಾಗಿ ಇಂದು ತಾವು ಅನುಭವಿಸಿದ ಸಂಕಷ್ಟ ಸ್ವತಃ ತಾವೇ ತಿಳಿಸುವಂತೆ ಕುಮಾರಸ್ವಾಮಿ ಅವರನ್ನು ಮನವಿ ಮಾಡಿಕೊಂಡೆವು ಎಂದರು.

 

          ಇದೇ ವೇಳೆ ಮಾಜಿ ಮುಖ್ಯಮಂತ್ರಿ ಅವರಿಗೆ ಚಿಕಿತ್ಸೆ ನೀಡಿದ ಡಾ.ಚಿನ್ಮಯ ನಾಗೇಶ್ಡಾ. ಅನಿರುದ್ಧ ವಿಲಾಸ್ ಕುಲಕರ್ಣಿಡಾ.ರೇಶ್ಮಿ ದೇವರಾಜ್ಡಾ.ಅಭಿಜಿತ್ ವಿಲಾಸ್ ಕುಲಕರ್ಣಿ ಹಾಗೂ ಶಾಸಕ ಬಿ.ಎನ್. ರವಿಕುಮಾರ್ಮಾಜಿ ಕೆ.ಟಿ. ಶ್ರೀಕಂಠೇಗೌಡ ಮುಂತಾದವರು ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top