ವಿಜಯನಗರದಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಧೃಡ

ವಿಜಯನಗರ : ಕರ್ನಾಟಕದಲ್ಲಿ ಈಗಾಗಲೇ ಕೊರೋನಾ ಪ್ರಕರಣಗಳ ಸಂಖ್ಯೆ ದಿನೆ ದಿನೇ ಹೆಚ್ಚಳವಾಗುತ್ತಿದ್ದು, ಇದೀಗ ವಿಜಯನಗರ ಜಿಲ್ಲೆಯಲ್ಲಿಯೂ ಎರಡು ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

 

ಹೊಸಪೇಟೆಯ ಸಂಕ್ಲಾಪುರ ಹಾಗೂ ಜಂಬುನಾಥ ಪ್ರದೇಶದ ಮಹಿಳೆಯರಿಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಸೋಂಕಿತ ಮಹಿಳೆಯರು ಹೋಂ ಕ್ವಾರಂಟೈನ್ ಆಗಿದ್ದಾರೆ.

ಒಬ್ಬರು ಸಂಡೂರಿಗೆ ತೆರಳಿದ್ದರು, ಇನ್ನೊಬ್ಬರ ಟ್ರಾವೆಲ್ ಹಿಸ್ಟರಿ ಇಲ್ಲ  ಎಂಬುದಾಗಿ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಇಲಾಖೆಯು ಇಬ್ಬರು ಸೋಂಕಿತರ ಕುಟುಂಬದ ಸದಸ್ಯರ ಗಂಟಲು ದ್ರವ  ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದೆ ಎಂದು ತಿಳಿಸಿದೆ. 

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top