ಬೂದಿ ಮುಚ್ಚಿದ ಕೆಂಡದಂತಿರುವ ಉದಯಗಿರಿ: ಬಿಗಿ ಪೊಲೀಸ್ ಬಂದೋಬಸ್ತ್

Kannada Nadu
ಬೂದಿ ಮುಚ್ಚಿದ ಕೆಂಡದಂತಿರುವ ಉದಯಗಿರಿ:  ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿದ್ದ ಸಂಬಂಧ ಉದ್ವಿಗ್ನಗೊಂಡಿದ್ದ ಮೈಸೂರಿನ ಉದಯಗಿರಿ ಬಡಾವಣೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದೆ.
ಉದಯಗಿರಿ ಪೊಲೀಸ್ ಠಾಣೆಯ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸಿರುವ ಪೊಲೀಸರು, 70ಕ್ಕೂ ಹೆಚ್ಚು ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನಾ ಸ್ಥಳದಲ್ಲಿ ಆರಕ್ಕೂ ಹೆಚ್ಚು ಕೆಎಸ್‍ಆರ್‍ಪಿ ತುಕಡಿಗಳು ಹಾಗೂ ಎಂಟಕ್ಕೂ ಹೆಚ್ಚು ಪೊಲೀಸ್ ಇನ್ಸ್‍ಪೆಕ್ಟರ್ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಈ ನಡುವೆ ಮುಷ್ತಾಕ್ ಮಕ್ಬೋಲಿ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಪ್ರಚೋದನಕಾರಿ ವಿಡಿಯೋ ಹಂಚಿದ್ದು, ಇದು ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಮಾಡುತ್ತಿದೆ. ಹೀಗಾಗಿ ಪೊಲೀಸರು ಅಲರ್ಟ್ ಆಗಿದ್ದು, ಮಕ್ಬೋಲಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ನಿಲ್ಲಿ. ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೊಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು, ಮರಣದಂಡನೆ ವಿಧಿಸಬೇಕು’ ಎಂದು ವಿಡಿಯೋದಲ್ಲಿ ಹೇಳಲಾಗಿದೆ. ಗಲಭೆಗೂ ಮುನ್ನ ಈ ವಿಡಿಯೋ ಹರಿಬಿಡಲಾಗಿದೆ ಎನ್ನಲಾಗುತ್ತಿದೆ.
ಪ್ರತಿಭಟನಾ ನಿರತರನ್ನು ಚದುರಿಸಿದ ಬಳಿಕ ಪರಿಸ್ಥಿತಿ ಸಹಜವಾಗುತ್ತಿದ್ದಂತೆ ಠಾಣೆ ಆವರಣ ಸೇರಿದಂತೆ ಸುತ್ತಲಿನ ರಸ್ತೆಗಳಲ್ಲಿ ಪರಿಶೀಲನೆ ನಡೆಸಿದ ಪೆÇಲೀಸರು, ಕಲ್ಲು ತೂರಾಟದ ವೇಳೆ ಬಿದ್ದ ರಾಶಿ ಗಟ್ಟಲೆ ಕಲ್ಲುಗಳನ್ನು ಚೀಲದಲ್ಲಿ ಸಂಗ್ರಹಿಸಿದರು. ಪೊಲೀಸ್ ವಾಹನಗಳ ಮೇಲೂ ಬಿದ್ದ ಕಲ್ಲುಗಳನ್ನು ಮಹಜರು ನಡೆಸಿ ವಶಪಡಿಸಿಕೊಂಡರು.
ಪ್ರಕರಣ ಸಿಸಿಬಿಗೆ:
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಪೊಸ್ಟ್ ಮಾಡಿದ ಸಂಬಂಧ ದಾಖಲಾದ ಪ್ರಕರಣ ಮತ್ತು ಠಾಣೆ ಎದುರು ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ಸಂಬಂಧ ಉದಯಗಿರಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವಹಿಸಿದ್ದಾರೆ. ಘಟನೆ ಸಂಬಂಧ ಫೆ.10 ರಾತ್ರಿ ಮತ್ತು ಮರುದಿನ ಬೆಳಗ್ಗೆ ದಾಖಲಾದ ಪ್ರಕರಣದ ತೀವ್ರ ತನಿಖೆಗಾಗಿ ಸಿಸಿಬಿಗೆ ವಹಿಸಲಾಗಿದೆ. ಪ್ರಕರಣದ ಹಿನ್ನಲೆದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟ್ ಹಾಕಿದ್ದ ವಿಚಾರ ವೈರಲ್ ಆಗುತ್ತಿದ್ದಂತೆ ಉದಯಗಿರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಿದ್ದರು. ಆದರೆ, ಆತನಿಗೆ ನ್ಯಾಯಾಲಯದಲ್ಲಿ ಜಾಮೀನು ಬೇಗನೆ ದೊರೆಯಲಿದ್ದು, ಪೊಲೀಸರೇ ಸಹಕಾರ ನೀಡಲಿದ್ದಾರೆ ಎನ್ನುವ ವದಂತಿಯಿಂದ ಸಾವಿರಾರು ಜನರು ಸೋಮವಾರ ರಾತ್ರಿ ಉದಯಗಿರಿ ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಅಧಿಕಾರಿಗಳು ಮಾಡಿದ ಮನವಿಗೆ ಕ್ಯಾರೆ ಎನ್ನದಿದ್ದಾಗ ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದರು. ಈ ವೇಳೆ ದುಷ್ಕರ್ಮಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";