ಕುಸಿದು ಬಿದ್ದ ₹1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ!

ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳೀಯರು ಸೇತುವೆ ಕುಸಿದು ಬೀಳುತ್ತಿರುವ ವೀಡಿಯೋಗಳನ್ನು ಸೆರೆಹಿಡಿದ್ದು, ಇವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

 

ಸೇತುವೆಯನ್ನು ಖಗಾರಿಯಾ, ಆಗುವನಿ ಮತ್ತು ಸುಲ್ತಾನ್‌ಗಂಜ್ ನಡುವೆ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿತ್ತು. ಏಪ್ರಿಲ್‌ನಲ್ಲಿ ಸುರಿದಿದ್ದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು. 2 ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎಂದು ವರದಿಗಳು ತಿಳಿಸಿವೆ.

ಏಪ್ರಿಲ್‌ನಲ್ಲಿ ಸೇತುವೆಗೆ ಹಾನಿಯಾಗಿದ್ದಾಗ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿರಲಿಲ್ಲ. ಹೀಗಾಗಿ ನಿರ್ಮಾಣಹಂತದಲ್ಲಿದ್ದಾಗಲೇ ಸೇತುವೆ ಕುಸಿದಿದೆ. ಈ ಹಿನ್ನೆಲೆ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಸರ್ಕಾರವನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top