ತುಮಕೂರು ರೈತರಿಗೆ ಉಂಡೇ ಕೊಬ್ಬರಿ ಖರೀದಿಗೆ ಸಂಬಂಧಪಟ್ಟ ಮೊತ್ತ ಪಾವತಿ: ಕೇಂದ್ರ ಸಚಿವ ವಿ. ಸೋಮಣ್ಣ

ತುಮಕೂರು: ೨೦೨೪ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು ೨೭೦೦೦ ರೈತರಿಂದ ಒಟ್ಟು ೩,೧೫,೦೦೦ ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.೩೭೮ ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಸುಮಾರು ೨೪೬೦೦ ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆಯೆಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ. 

ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದಿಂದಾಗಿ ದಿನಾಂಕ ೦೫.೦೮.೨೦೨೪ರವರೆಗೆ ಸುಮಾರು ರೂ.೩೪೬.೫೦ ಕೋಟಿ ಮೊತ್ತವನ್ನು (ಪ್ರತಿಶತ ೯೨ ರಷ್ಟು) ರೈತರ ಖಾತೆಗೆ ನೇರವಾಗಿ(ಡಿಬಿಟಿ ಮುಖೇನ) ಪಾವತಿಸಲಾಗಿದೆ. ಬಾಕಿ ಉಳಿದ ಸುಮಾರು ೨೪೩೮ ರೈತರ ಖಾತೆಗೆ ಅಂದಾಜು ೩೧.೬೪ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ (ಪ್ರತಿಶತ ೮ರಷ್ಟು ಮಾತ್ರ) .

ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

 ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.೬೯೧ ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ಸೋಮಣ್ಣ ಅವರು ತಿಳಿಸಿದ್ದಾರೆ.

ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಸೋಮಣ್ಣ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

Facebook
Twitter
LinkedIn
WhatsApp
Email
Telegram
Print

Leave a Comment

Your email address will not be published. Required fields are marked *

Translate »
Scroll to Top