ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದು, ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಹೆಚ್ ಡಿ ಕುಮಾರಸ್ವಾಮಿ ರೈಲ್ವೆ ಸಚಿವರನ್ನು ಕೇಳಿದ್ದಾರೆ.
Facebook
Twitter
LinkedIn
Telegram
WhatsApp
Email
Print