ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ.  ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಇಂದು ವಿಧಾನ ಸೌಧದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.  ಎಲ್ಲ ವಿಪಕ್ಷಗಳ ನಾಯಕರು ಇಂದು ಮತ್ತು ನಾಳೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ವಿವರಿಸಿದರು.

ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುತ್ತಿರುವುದೇ ಬಿಜೆಪಿಯ ಕೊಡುಗೆ :

ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರ ನೀಡುತ್ತಾ, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ ಎಂದು ತಿಳಿಸಿದರು.

ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ :

ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಬಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾದ್ಯವಿಲ್ಲ. ಎಂದರು.

ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ :

ಜೆಡಿಎಸ್ ನ ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ ಡಿ ಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ ಎಂದು ಜೆಡಿಎಸ್ ನ ಕುಮಾರಸ್ವಾಮಿಯವರು ಹೇಳುತ್ತಿರುವ ಬಗ್ಗೆ ಉತ್ತರ ನೀಡುತ್ತಾ , ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರ್ಥ ಎಂದರು. ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆನ್ನಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ ,  ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದರು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top