ಖಾಸಗಿ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಕೆ: ೭ ವಿಶೇಷ ತಂಡ ರಚನೆ, ಜೂ.೧ರಿಂದ ಕರ‍್ಯಾಚರಣೆಗೆ ಸಾರಿಗೆ ಇಲಾಖೆ ಮುಂದು!

ಬೆಂಗಳೂರು: ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿದ್ದು, ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕರ‍್ಯಾಚರಣೆ ಆರಂಭಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಮೊದಲಿಗೆ ೫೦೦, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲು ಇಲಾಖೆ ನರ‍್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ರ‍್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರುವ ವಾಹನಗಳಲ್ಲಿ ಮಾತ್ರ ರ‍್ನಾಟಕ ರ‍್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತುಪಡಿಸಿ, ರ‍್ಕಾರದ ಅಧೀನದಲ್ಲಿ ಬರುವ ರ‍್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ರ‍್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌.

 

ಉದಾಹರಣೆಗೆ ಕೆಎಸ್ಆರ್ಟಿಸಿ ನಿಗಮವಾದರೂ ಅಧಿಕಾರಿಗಳು ರ‍್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆ ರವಾನಿಸಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top