ರಾಜ್ಯದ ಸಂಶೋಧನಾ ಕ್ಷೇತ್ರದಲ್ಲಿ ಹೂಡಿಕೆಗಿರುವ ವಿಫುಲ ಅವಕಾಶಗಳನ್ನು ಬಳಸಿಕೊಳ್ಳಿ: ಬಿ.ನಾಗೇಂದ್ರ

ಬೆಂಗಳೂರು : ನಮ್ಮ ಸರ್ಕಾರ ರಾಜ್ಯವನ್ನು ಸಂಶೋಧನಾ ಕ್ಷೇತ್ರದ ಪ್ರಮುಖ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ನಂತಹ ಹಲವಾರು ಯೋಜನೆಗಳನ್ನ ರೂಪಿಸಿದೆ. ಹಾಗೆಯೇ, ಸಂಶೋಧನಾ ಕ್ಷೇತ್ರದ ಹೂಡಿಕೆಗೆ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದ್ದು ಸಂಸ್ಥೆಗಳ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಕರೆ ನೀಡಿದರು. 

ಇಂದು ನಗರದಲ್ಲಿ ವಿಜ್ಹಿ ಸಂಸ್ಥೆ ಹಾಗೂ ಯೂನಿವರ್ಸಿಟಿ ಆಫ್ ಇಲಿನಾಯ್ಸ್ ಅರ್ಬಾನಾ-ಚಾಂಪೇನ್‌ನ ಮಧ್ಯೆ ಸಂಶೋಧನೆಗಾಗಿ ನಡೆದಂತಹ ಒಡಂಬಡಿಕೆಗೆ ಸಾಕ್ಷಿಯಾಗಿ ಅವರು ಮಾತನಾಡಿದರು. ನಮ್ಮ ದಿನನಿತ್ಯದ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಶೋಧನೆಗಳ ಪಾತ್ರ ಪ್ರಮುಖವಾದದ್ದು. ಇಂದಿನ ಒತ್ತಡದ ಜೀವನಶೈಲಿಯಿಂದಾಗಿ ಟೈಪ್‌-೨ ನಂತಹ ಕಾಯಿಲೆಗಳಿಗೆ ಜನರು ಸುಲಭವಾಗಿ ತುತ್ತಾಗುತ್ತಿದ್ದಾರೆ. ಈ ರೋಗಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಂಶೋಧನೆಯ ಅಗತ್ಯವನ್ನು ಮನಗೊಂಡು ನಮ್ಮ ಕನ್ನಡಿಗದ್ದೇ ಆದ ವಿಜ್ಹಿ ಸಂಸ್ಥೆ ಅಮೇರಿಕಾದ ವಿಶ್ವವಿದ್ಯಾಲಯದಲ್ಲಿ 12.5 ಮಿಲಿಯನ್‌ ಹಣವನ್ನು ಹೂಡಿಕೆ ಮಾಡುತ್ತಿರುವುದು ಬಹಳ ಹೆಮ್ಮೆಯ ವಿಷಯ. ಸಂಶೋಧನೆಗಳ ಮಹತ್ವವನ್ನು ನಮ್ಮ ಸರಕಾರ ಅರಿತಿದೆ. ರಾಜ್ಯವನ್ನು ಸಂಶೋಧನೆಯ ಪ್ರಮುಖ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪನೆಗೆ ಎಲ್ಲಾ ಕ್ರಮಗಳನ್ನ ಕೈಗೊಂಡಿದೆ. ಹಾಗೆಯೇ, ಸಂಶೋಧನಾ ಕ್ಷೇತ್ರದಲ್ಲಿ ಹೂಡಿಕೆಗೆ ಬಹಳಷ್ಟು ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಇದನ್ನ ವಿಜ್ಹಿ ಯಂತಹ ಸಂಸ್ಥೆಗಳು ಸದುಪಯೋಗಪಡಿಸಿಕೊಳ್ಳಬೇಕು. ಈ ಮೂಲಕ ರಾಜ್ಯದಲ್ಲಿ ಸಂಶೋಧನೆಯ ಪರಿಸರವನ್ನ ಅಭಿವೃದ್ದಿಪಡಿಸುವ ಜೊತೆಯಲ್ಲಿಯೇ ಉದ್ಯೋಗಾವಕಾಶಗಳ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top