ರಾಜ್ಯದಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ೧೫ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಇಂದು ಕೂಡ ಮುಂದುವರಿದಿದ್ದು ಎಲ್ಲೆಡೆಯಿಂದ ಶಾಲಾ ಮಕ್ಕಳು ಮತ್ತು ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲಿ ೫೩೨ ಸ್ಥಳಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನ ೧೭ ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ೮೪ ಸಾವಿರ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ನಾಳೆಯೊಳಗೆ ಈ ಗುರಿ ತಲುಪಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೀನಾಕ್ಷಿ ತಿಳಿಸಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ನಿನ್ನೆ ೧೪ ಸಾವಿರದ ೩ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ೯ನೇ ತರಗತಿಯಿಂದ ಪಿಯುಸಿವರೆಗಿನ ೭೭ ಸಾವಿರದ ೬೭೭ ಮಕ್ಕಳಿಗೆ ಮುಂದಿನ ಮೂರು ದಿನಗಳ ಒಳಗಾಗಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಮಕ್ಕಳ ಆರೋಗ್ಯಾಧಿಕಾರಿ ಡಾ. ಜಯಾನಂದ ಹೇಳಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top