ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​; ಡೆತ್​ನೋಟ್​ನಲ್ಲಿದ್ದ ಇಬ್ಬರು ಅಧಿಕಾರಿಗಳು ಅಮಾನತು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರಿಂದ ಎಚ್ಚೆತ್ತ ರಾಜ್ಯ ರ‍್ಕಾರ, ಡೆತ್ನೋಟ್ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನರ‍್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.

ಯಾರನ್ನೂ ರಕ್ಷಣೆ ಮಾಡುವ ಪ್ರೆಶ್ನೆಯೇ ಇಲ್ಲ-ಸಚಿವ ನಾಗೇಂದ್ರ:

ಈ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ‘ ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರೆಶ್ನೆಯೇ ಇಲ್ಲ. ನಮ್ಮ ರ‍್ಕಾರದ ಹಣ ನಾವು ದುರುಪಯೋಗ ಆಗಲು ಬಿಡುವುದಿಲ್ಲ. ೮೮ ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಾಸ್  ಪಡೆಯುತ್ತಿದ್ದಾರೆ. ಜೊತೆಗೆ ಈ ಪ್ರಕರಣವನ್ನ ರಾಜ್ಯ ರ‍್ಕಾರ ಮೊನ್ನೆಯೇ ಸಿಐಡಿಗೆ ವಹಿಸಿದ್ದು, ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ ಎಂದರು.

ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ತನಿಖೆ:

 

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಬೆಂಗಳೂರು ಎರಡು ಅIಆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ರ‍್ಕಾರದ ಪರ‍್ವ ಅನುಮತಿ ಪಡೆದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಎಂ.ಡಿ , ಸಿಇಓ ಹಾಗೂ ಎಲ್ಲಾ ನರ‍್ದೇಶಕರು ಸೇರಿದಂತೆ ೬ ಜನ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಈIಖ ದಾಖಲಿಸಿದ್ದಾರೆ.  ಎಫ್. ಎಸ್. ಎಲ್ ಮತ್ತು ಸಿ. ಐ. ಡಿ ವರದಿ ಬಂದ ತಕ್ಷಣವೇ ಕಾನೂನು ರೀತಿಯಲ್ಲಿ ಎಲ್ಲರಿಗೂ ಕಠಿಣ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top