ವಾಲ್ಮೀಕಿ ಹಗರಣ : ಕೋರ್ಟ್‍ಗೆ ಚಾರ್ಜ್‍ ಶೀಟ್ ಸಲ್ಲಿಸಿದ ಎಸ್‍ಐಟಿ : ನಾಗೇಂದ್ರ, ದದ್ದಲ್ ಹೆಸರೇ ಕಣ್ಮರೆ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

          ಒಟ್ಟು 12 ಜನ ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನು ಈ ಚಾರ್ಜ್‌ ಶೀಟ್‌ನಲ್ಲಿ ಇಡಿ ಬಂಧನಕ್ಕೊಳಗಾಗಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಹಾಗೂ ಮತ್ತೋರ್ವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಹೆಸರು ಉಲ್ಲೇಖವಾಗಿಲ್ಲ.

ಚಾರ್ಜ್‌ ಶೀಟ್‌ನಲ್ಲಿ ಏನೇನು ಇದೆ?

 

ಈ ಹಿಂದೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು ಮೂರು ಸಾವಿರದ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಹಣ, ಚಿನ್ನ, ಕಾರು ಸೇರಿ 50 ಕೋಟಿ ರೂಪಾಯಿ ಜಪ್ತಿ ಮಾಡಿರುವುದಾಗಿ ಎಸ್‌ಐಟಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ನಗದು-16.83 ಕೋಟಿ ರೂಪಾಯಿ ಹಣ, 11 ಕೋಟಿ 70 ಲಕ್ಷ ಮೌಲ್ಯದ 16.252 ಕೆ.ಜಿ ಚಿನ್ನ, 4.51 ಕೋಟಿ ಮೌಲ್ಯದ ಲ್ಯಾಂಬರ್ಗಿನಿ ಉರುಸ್ ಹಾಗೆ, ಮರ್ಸಿಡೀಸ್ ಬೆಂಜ್ ಕಾರು, ತನಿಖಾಧಿಕಾರಿ ಬ್ಯಾಂಕ್ ಖಾತೆಯಿಂದ 3.19 ಕೋಟಿ ರೂ. ಹಣ, 13.72 ಕೋಟಿ ರೂ. ಹಣ ಫ್ರಿಡ್ಜ್‍ ಸೇರಿದಂತೆ ಒಟ್ಟು ಒಟ್ಟು 49.96 ಕೋಟಿ ವಶಪಡಿಸಿಕೊಂಡ ವಸ್ತುಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

          ಇನ್ನು ಈ ಪ್ರಕರಣದಲ್ಲಿ ಮೊದಲು ಬಂಧನವಾಗಿರುವ ಆರೋಪಿಗಳ ವಿರುದ್ಧ ಮಾತ್ರ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸತ್ಯನಾರಾಯಣ ವರ್ಮಾ(ಹೈದರಾಬಾದ್), ಪದ್ಮನಾಭ (ವ್ಯವಸ್ಥಾಪಕ), ಪರುಶುರಾಮ್ (ಲೆಕ್ಕಾಧಿಕಾರಿ), ನೆಕ್ಕುಂಟಿ ನಾಗರಾಜ್ (ನಾಗೇಂದ್ರ ಆಪ್ತ), ನಾಗೇಶ್ವರ್ ರಾವ್(ನೆಕ್ಕುಂಟಿ ನಾಗರಾಜ್ ಸಂಬಂಧಿ), ಸತ್ಯನಾರಾಯಣ ಇನ್ನೂರಿ ತೇಜಾ (ಫಸ್ಟ್ ಫೈನಾನ್ಸ್ ಅಧ್ಯಕ), ಜಗದೀಶ್ (ಉಡುಪಿ), ತೇಜಾ ತಮ್ಮಯ್ಯ(ಬೆಂಗಳೂರು), ಪಿಟ್ಟಲ ಶ್ರೀನಿವಾಸ್‌ ಗಚ್ಚಿವೇಲಿ (ಆಂಧ್ರ ಪ್ರದೇಶ), ಸಾಯಿತೇಜ (ಹೈದರಾಬಾದ್) ಸೇರಿ ಒಟ್ಟು 12 ಆರೋಪಿಗಳ ಹೆಸರು ಉಲ್ಲೇಖವಾಗಿದೆ. ಆದ್ರೆ ಈ ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಅವರ ಹೆಸರಿಲ್ಲದಿರುವುದು ಆಶ್ಚರ್ಯಕರವಾಗಿದೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top