ಅಕಾಲಿಕ ಮಳೆಗೆ ವಿವಿಧ ಬೆಳೆಗಳು ಹಾನಿ: ಸೂಕ್ತ ಪರಿಹಾರಕ್ಕೆ ರೈತರಿಂದ ಸಚಿವರಿಗೆ ಮನವಿ

ಮಸ್ಕಿ : ತಾಲೂಕಿನ ಕಲ್ಮಂಗಿ ಹೋಬಳಿಯ ವಿವಿಧ ಗ್ರಾಮಗಳ ಹಾಗೂ ಕಲ್ಮಂಗಿ ಗ್ರಾಮ ಪಂಚಾಯತಿ ಸೇರಿದಂತೆ ಅನೇಕ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕಲಂಗಿ ಗ್ರಾಮದ ರೈತರು ರಾಯಚೂರ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿದರು.
ಸತತ ಮಳೆಯಿಂದಾಗಿ ಬೆಳೆಗಳು ಹಾಳಾಗಿದ್ದು ಅನೇಕ ಗ್ರಾಮಗಳ ರೈತರ ಕೃಷಿ ಭೂಮಿಗಳಲ್ಲಿದ್ದ ಭತ್ತ,ತೊಗರಿ ಮೆಣಸಿನಗಿಡ, ಬಿಟಿ ಹತ್ತಿ, ಉಳ್ಳಾಗಡ್ಡಿ ಹಾಗೂ ಇತರ ಬೆಳೆಗಳು ಸೇರಿದಂತೆ ಮುಂಗಾರು ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, ಎಕರೆಯೊಂದಕ್ಕೆ 25 ಸಾವಿರ ರೂ. ಖರ್ಚು ಮಾಡಲಾಗಿದೆ ಹಾನಿಗೀಡಾದ ರೈತರ ಜಮೀನುಗಳಿಗೆ ಹೋಗಿ ಅಧಿಕಾರಿಗಳು ಪರಿಶೀಲನೆ ಮಾಡಿ ಎರಡು ಮೂರು ದಿನದಲ್ಲಿ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಹಾನಿಯಾದ ಕೃಷಿ ಪ್ರದೇಶಕ್ಕೆ ಪ್ರತಿ ಎಕರೆಗೆ 35 ಸಾವಿರ ರೂ. ಪರಿಹಾರ ನೀಡಬೇಕು ಮತ್ತು ರೈತರು ತಮ್ಮ ಭೂಮಿಯಲ್ಲಿ ಬಿತ್ತನೆ ಮಾಡಲು ಕಡಲೇಬೀಜ ರೈತರಿಗೆ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಒದಗಿಸಿ ಕೊಡಬೇಕು ಮತ್ತು ಶೀಘ್ರವಾಗಿ ಸೂಕ್ತ ಪರಿಹಾರ ನೀಡಬೇಕು ಒಂದು ವೇಳೆ ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ವಿವರಿಸಲಾಗಿದೆ. ಈ ಸಂದರ್ಭದಲ್ಲಿ ಕಲ್ಮಂಗಿ ಹೋಬಳಿಯ ವಿವಿಧ ರೈತರು ಹಾಗೂ ಮುಖಂಡರು ಭಾಗಿಯಾಗಿದ್ದರು.

Leave a Comment

Your email address will not be published. Required fields are marked *

Translate »
Scroll to Top