ಬೆಂಗಳೂರಿನಲ್ಲಿ ವೀರ ಸಾವರ್ಕರ್ ನಾಮಫಲಕಕ್ಕೆ ಮಸಿ: ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿ ಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ‍್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದರ‍್ದೈವವಾಗಿದೆ.”

ಸಾವರ್ಕರ್ ಅವರನ್ನು ಅಪಮಾನಿಸುವ ಸಂರ‍್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರರ‍್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದರು.

 ಏನಿದು ಘಟನೆ

ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಂಗಳವಾರ ಮಸಿ ಬಳಿದಿದ್ದರು. ಘಟನೆಯಲ್ಲಿ ನಿಶ್ಚಯ್‌ ಗೌಡ, ಲಕ್ಷಗೌಡ, ಪ್ರವೀಣ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಾರ‍್ಕರ್ ಮೇಲ್ಸೇತುವೆ ನಾಮ ಫಲಕಕ್ಕೆ ಮಸಿ ಬಳಿದಿರುವ ಎನ್ಎಸ್‌ಯುಐ ಕರ‍್ಯರ‍್ತರು, ವೀರ್ ಸಾರ‍್ಕ್ಗೆ ಸಿಗುತ್ತಿರುವ ಸಿಗುತ್ತಿರುವ ಗೌರವ ಭಗತ್ ಸಿಂಗ್ಗೆ ಸಿಗುತ್ತಿಲ್ಲ, ಸಾವರ್ಕರ್ ಸೇತುವೆ ಬದಲು ಭಗತ್ ಸಿಂಗ್ ಹೆಸರಿಡುವಂತೆ ಆಗ್ರಹಿಸಿ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಸಾವರ್ಕರ್ ಹೆಸರಿಗೆ ಮತ್ತು ಭಾವಚಿತ್ರಕ್ಕೆ ಮಸಿ ಬಳಿದಿದ್ದರು. ಬಳಿಕ ಸೇತುವೆಗೆ ಭಗತ್ ಸಿಂಗ್ ಮೇಲ್ಲೇತುವೆ ಹೆಸರಿನ ಬ್ಯಾನರ್ ಹಾಕಿದ್ದರು.

ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಜನರ ನಡುವೆ ವಾಗ್ವಾದ ಉಂಟಾಗಿತ್ತು. ಸ್ಥಳೀಯ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್, ಬಿಜೆಪಿ ಕಾರ್ಯಕರ್ತ‍್ತರು ಕೂಡ ಇದರ ವಿರುದ್ದ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಬಿಬಿಎಂಪಿಯ ಅಧಿಕಾರಿಗಳು ಯಲಹಂಕ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ವರದಿಯಾಗಿದೆ.

 

 

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top