ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ

ಮೈಸೂರು: ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜರ‍್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ‍ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆರ‍್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ರ‍್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ – ೨೦೨೪ ಯನ್ನು ನೀಡಲಾಗುತ್ತಿದೆ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ಅವರು ಭಾನುವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ದೇಶಪ್ರೇಮವನ್ನು ತುಂಬುವಲ್ಲಿ ಭಾಷಣ ಮತ್ತು ಬರಹಗಳ ಮೂಲಕ ಕೊಡುಗೆ ನೀಡಿದ ಚಕ್ರವರ್ತಿ ‍ ಸೂಲಿಬೆಲೆ ಅವರಿಗೆ ಈ ವರ್ಷದ ‘ವೀರ್ ಸಾರ‍್ಕರ್ ಸಮ್ಮಾನ್ ಪ್ರಶಸ್ತಿ-೨೦೨೪’ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿಯು ರೂ.೧ ಲಕ್ಷ ನಗದು, ಸಾರ‍್ಕರ್ ಪುತ್ಥಳಿ ಹಾಗೂ ಫಲಕ ಹೊಂದಿದೆ. ಈ ಪ್ರಶಸ್ತಿಯನ್ನು ಮೇ ೨೮ರಂದು ಸಂಜೆ ೫.೩೦ಕ್ಕೆ ನಗರದ ‍ಕರ್ನಾಟಕ ಕಲಾಮಂದಿರ ಸಭಾಂಗಣದಲ್ಲಿ ನಡೆಯುವ ‍ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ಮಧ್ಯಾಹ್ನ ೨ ಗಂಟೆಗೆ ಸಾರ‍್ಕರ್ ವೇಷಭೂಷಣ, ಚಿತ್ರಕಲೆ ಹಾಗೂ ರಂಗೋಲಿ ಸ್ರ‍್ಧೆ ನಡೆಯಲಿದೆ. ಈಗಾಗಲೇ ಮೊಬೈಲ್ ಮೂಲಕ ಸಾರ‍್ಕರ್ ಕುರಿತು ಮಾಡಿರುವ ರೀಲ್ಸ್ ಗಳನ್ನು ಪಡೆಯಲಾಗುತ್ತಿದೆ. ಪ್ರತಿ ಸ್ರ‍್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ ೫ ಸಾವಿರ, ದ್ವಿತೀಯ ಬಹುಮಾನವಾಗಿ ೩ ಸಾವಿರ, ತೃತೀಯ ಬಹುಮಾನವಾಗಿ ೧೦೦೦ ನಗದು ಬಹುಮಾನದ ಜೊತೆಗೆ ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಸಮಾರಂಭದಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಖ್ಯಾತ ಲೇಖಕ ಡಾ.ಎಸ್.ಎಲ್.ಭೈರಪ್ಪ ಆಗಮಿಸಲಿದ್ದು, ಪತ್ರರ‍್ತ ಅಜಿತ್ ಹನುಮಕ್ಕನವರ್ ಭಾಷಣ ಮಾಡಲಿದ್ದಾರೆಂದು ತಿಳಿಸಿದರು.

 

ಸಾರ‍್ಕರ್ ಅವರ ಕುರಿತು ಸಂಶೋಧನೆ ಮತ್ತು ಪುಸ್ತಕಗಳ ಪ್ರಕಟಣೆಗಾಗಿ ಕಳೆದ ರ‍್ಷ ವಿಕ್ರಮ್ ಸಂಪತ್ ಅವರಿಗೆ ‘ವೀರ್ ಸಾವರ್ಕರ್ ಸಮ್ಮಾನ್ ಪ್ರಶಸ್ತಿ’ಯನ್ನು ನೀಡಲಾಗಿತ್ತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top