ಬೆಂಗಳೂರು: ಹಿರಿಯ ಪತ್ರಕರ್ತರು, ಛಾಯಾಗ್ರಾಹಕರು, ವರದಿಗಾರರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಮಿಂಚು ಶ್ರೀನಿವಾಸ್ ಅವರು ಮಂಗಳವಾರ ರಾತ್ರಿ ನಿಧನರಾದರು.
ಮೃತರಿಗೆ ಪತ್ನಿ ಹಾಗೂ ತಾಯಿ ಇದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮಿಂಚು ಪತ್ರಿಕೆಯ ಸಂಪಾದಕರಾಗಿದ್ದ ಡಾ.ಕೆ.ಶ್ರೀನಿವಾಸ್ ಅವರು ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಕರ್ತರ ಹಲವಾರು ಸಂಘಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಪತ್ರಕರ್ತರ ನೋವು ನಲಿವುಗಳಿಗೆ ಸ್ಪಂದಿಸಿದ್ದಾರೆ. ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರ ಹಾಗೂ ಸಂಪಾದಕರ ಸಂಘದಲ್ಲಿ ಪದಾಧಿಕಾರಿಯಾಗಿ, ಹಾಲಿ ಕೇರಾ ಸಂಘಟನೆಯ ಬೆಂಗಳೂರು ಜಿಲ್ಲಾಧ್ಯಕ್ಷರಾಗಿದ್ದರು.
ಇವರ ಅಂತ್ಯಕ್ರಿಯೆ ಬುಧವಾರ ವಿಧಿವಿಧಾನಗಳದಿಗೆ ಬನಶಂಕರಿಯ ಚಿತಾಗಾರದಲ್ಲಿ ನಡೆಯಿತು. ಇವರ ನಿಧನಕ್ಕೆ ಪತ್ರಿಕಾ ಸಂಘಟನೆಗಳು, ಗಣ್ಯರು, ಪತ್ರಕರ್ತ ಮಿತ್ರರು ಸ್ನೇಹಿತರು ಸಂತಾಪ ಸೂಚಿಸಿದರು.
Facebook
Twitter
LinkedIn
Telegram
WhatsApp
Email
Print